Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಎಸ್‌ಸಿ ನೇಮಕಾತಿ ಹಗರಣ : ಆಯೋಗದ...

ಕೆಪಿಎಸ್‌ಸಿ ನೇಮಕಾತಿ ಹಗರಣ : ಆಯೋಗದ ಮತ್ತಷ್ಟು ಅಕ್ರಮ ನೇಮಕಾತಿಗಳ ತನಿಖೆಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ21 Nov 2026 11:32 PM IST
share
ಕೆಪಿಎಸ್‌ಸಿ ನೇಮಕಾತಿ ಹಗರಣ : ಆಯೋಗದ ಮತ್ತಷ್ಟು ಅಕ್ರಮ ನೇಮಕಾತಿಗಳ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿರುವ ಬೃಹತ್ ಅಕ್ರಮದ ತನಿಖೆಯನ್ನು ಆಯೋಗದ ಇತರ ನೇಮಕಾತಿಗಳಿಗೂ ವಿಸ್ತರಿಸಲು ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಜಾರಿ ನಿರ್ದೇಶನಾಲಯ(ಈ.ಡಿ.) ಹಂಚಿಕೊಂಡಿರುವ ಮಾಹಿತಿಯ ಆಧಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಿಸಿ, ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸುವಂತೆ ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

ಪಶು ವೈದ್ಯಾಧಿಕಾರಿಗಳ ಅಕ್ರಮ ನೇಮಕಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೆಪಿಎಸ್‌ಸಿಯ ಕಾರ್ಯವೈಖರಿ ಹಾಗೂ ನೇಮಕಾತಿ ಪ್ರಕ್ರಿಯೆಯ ವಿಶ್ವಾಸಾರ್ಹತೆ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದೆ.

ನೇಮಕಾತಿಯಲ್ಲಿ ಅರ್ಹತೆಯನ್ನು ಕಡೆಗಣಿಸಿದರೆ ಹಗಲಿರುಳು ಕಷ್ಟಪಟ್ಟು ಓದುವ ಬಡ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯವೇನು? ಜನಸಾಮಾನ್ಯರು ಸಾಂವಿಧಾನಿಕ ವ್ಯವಸ್ಥೆಯನ್ನು ನಂಬುವುದಾದರೂ ಹೇಗೆ? ಕೆಪಿಎಸ್‌ಸಿಯ ಪ್ರತಿಯೊಂದು ನೇಮಕಾತಿಯಲ್ಲೂ ಹಗರಣಗಳೇ ಸದ್ದು ಮಾಡುತ್ತಿವೆಯಲ್ಲ? ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಮಾದರಿಯಲ್ಲಿ ಪಾರದರ್ಶಕವಾಗಿ ಏಕೆ ಕಾರ್ಯನಿರ್ವಹಿಸುತ್ತಿಲ್ಲ? ಎಂದು ನ್ಯಾಯಪೀಠ ಆಯೋಗವನ್ನು ತರಾಟೆಗೆ ತೆಗೆದುಕೊಂಡಿತು.

ಕೆಪಿಎಸ್‌ಸಿ ನಡೆಸಿರುವ ಹಲವು ನೇಮಕಾತಿಗಳಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ಈ.ಡಿ. ಅಧಿಕಾರಿಗಳು ಎಸ್‌ಐಟಿಯೊಂದಿಗೆ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಮತ್ತಷ್ಟು ಎಫ್‌ಐಆರ್‌ಗಳನ್ನು ದಾಖಲಿಸುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಸರಕಾರದ ಪರ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಈ.ಡಿ. ನೀಡಿರುವ ಮಾಹಿತಿ ಆಧರಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಈ.ಡಿ. ಹಂಚಿಕೊಂಡಿರುವ ಮಾಹಿತಿ ಬಗ್ಗೆಯೂ ಎಫ್‌ಐಆರ್ ದಾಖಲಿಸಬೇಕು. ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಎಸ್‌ಐಟಿಗೆ ವರ್ಗಾಯಿಸಬೇಕು ಎಂದು ಆದೇಶಿಸಿ ಅರ್ಜಿ ವಿಚಾರಣೆ ಮುಂದೂಡಿತು.

Tags

KPSC Recruitment ScamHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X