Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಒತ್ತಡ...

ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಒತ್ತಡ ಕಡಿಮೆ ಮಾಡಲು ಕ್ರಮ : ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ30 Sept 2024 9:16 PM IST
share
ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಒತ್ತಡ ಕಡಿಮೆ ಮಾಡಲು ಕ್ರಮ : ಕೃಷ್ಣ ಬೈರೇಗೌಡ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಒತ್ತಡಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಸೋಮವಾರ ವಿಕಾಸಸೌಧದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಪದಾಧಿಕಾರಿಗಳ ಜೊತೆ ಅವರ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ ‘ಫ್ರೂಟ್ಸ್’ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ ಖಾತೆಗೆ ನೇರವಾಗಿ ಬರ ಪರಿಹಾರ ತಲುಪಿಸುವುದು ಸಾಧ್ಯವಾಗುತ್ತಿರಲಿಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್ ಆ್ಯಪ್ ಹಾಗೂ ಆಧಾರ್ ಸೀಡಿಂಗ್ ಹಾಗೂ ಫೌತಿ ಖಾತೆ ಅಭಿಯಾನದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವವಾದದ್ದು. ಹೀಗಾಗಿ ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಎಲ್ಲ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೆ, ಅವರ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಇಂದಿನ ಸಭೆಯಲ್ಲಿ ಭರವಸೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್ಟಾಪ್ ನೀಡಬೇಕು ಎಂಬ ಬೇಡಿಕೆ ಇದೆ. ಸರಕಾರವೂ ಈಗಾಗಲೇ ಈ ಬಗ್ಗೆ ಚಿಂತನೆ ನಡೆಸಿದೆ. ಫೀಲ್ಡ್ ನಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಲ್ಯಾಪ್‌ ಟಾಪ್-ಮೊಬೈಲ್ ಎರಡೂ ರೀತಿ ಕೆಲಸ ಮಾಡಬಲ್ಲ ಟ್ಯಾಬ್ ನೀಡುವ ಬಗ್ಗೆ ಚಿಂತಿಸಲಾಗಿದೆ. ಈಗಾಗಲೇ ಸಣ್ಣ ಪ್ರಮಾಣದಲ್ಲಿ ಅಧಿಕಾರಿಗಳಿಗೆ ಟ್ಯಾಬ್ ವಿತರಿಸಲಾಗಿದ್ದು, ಮುಂದಿನ ವರ್ಷದೊಳಗೆ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್ ನೀಡಲು ಸರಕಾರ ಹಾಗೂ ಇಲಾಖೆ ಬದ್ಧವಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೂ ಸರಕಾರಿ ಕಚೇರಿ ನಿರ್ಮಿಸಬೇಕು, ಮೂಲಭೂತ ಸೌಲಭ್ಯ ಒದಗಿಸಬೇಕು ಎಂಬ ಪ್ರಮುಖ ಬೇಡಿಕೆ ಇದೆ. ಸರಕಾರಿ ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂಬ ವಿಚಾರದಲ್ಲಿ ನನ್ನ ಅಭಿಪ್ರಾಯವೂ ಅದೇ ಆಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲೆ ವರ್ಗಾವಣೆ ನೀಡುವ ಸಂಬಂಧ ‘ಕೆಸಿಎಸ್‍ಆರ್ 16ಎ’ ನಿಯಮದ ಅನ್ವಯ ನಿಯಮಬದ್ಧವಾಗಿ ಬಂದಿರುವ ಪ್ರಸ್ತಾವನೆಗಳ ಕುರಿತು ಮುಂದಿನ ವಾರದೊಳಗೆ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಗ್ರಾಮ ಆಡಳಿತ ಅಧಿಕಾರಿಗಳನ್ನು ಅನಗತ್ಯವಾಗಿ ಎಸಿ, ಡಿಸಿ ಕಚೇರಿಗಳಿಗೆ ಮಾಡಲಾಗಿರುವ ಡೆಪ್ಯುಟೇಷನ್ (ನಿಯೋಜನೆ) ರದ್ದುಗೊಳಿಸುವ ಸಂಬಂಧ ಈಗಾಗಲೇ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಳಿದಂತೆ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರಕಾರದಿಂದ ಸಾಧ್ಯವಾಗುವ ಎಲ್ಲ ಬೇಡಿಕೆಗಳ ಬಗ್ಗೆಯೂ ಚಿಂತಿಸಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು.

ಅಲ್ಲದೆ, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಪರಿಶೀಲಿಸುವ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ಬೆಂಗಳೂರು ವಲಯದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಹೀಗಾಗಿ ಅವರು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ಆಮ್ಲನ್ ಆದಿತ್ಯ ಬಿಸ್ವಾಸ್ ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಆಯುಕ್ತ ಸುನೀಲ್ ಕುಮಾರ್ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೂ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X