Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ ಎಲ್ಲಾ...

ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನೂ ಮುಂದಿನ 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಕೃಷ್ಣ ಬೈರೇಗೌಡ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Jan 2025 7:06 PM IST
share
ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನೂ ಮುಂದಿನ 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ಉಪ ವಿಭಾಗಾಧಿಕಾರಿಗಳ(ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳಿಗೆ ಗಡುವನ್ನು ನಿಗದಿಗೊಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ ಎಂದು ಹೇಳಿದರು.

ಆದರೆ, ಕಳೆದ ವರ್ಷ ಕಾಂಗ್ರೆಸ್ ಸರಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ತಡೆ ಹಾಕಬೇಕು ಎಂಬುದು ನಮ್ಮ ಸರಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು ಎಂದು ಅವರು ಸ್ಮರಿಸಿದರು.

ಆದರೆ, ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು ಎಂದು ಕೃಷ್ಣ ಬೈರೇಗೌಡ ಕರೆ ನೀಡಿದರು.

ಆರು ತಿಂಗಳಲ್ಲಿ ಎಲ್ಲ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದರೂ ಆಗಿಲ್ಲ ಅಂದರೆ ಸರಕಾರಕ್ಕೆ, ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ನಿರಂತರವಾಗಿ ಉಪ ವಿಭಾಗಾಧಿಕಾರಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು ಎಂದು ಅವರು ಸೂಚಿಸಿದರು.

ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು ಎಂದು ಕೃಷ್ಣ ಭೈರೇಗೌಡ ಎಚ್ಚರಿಸಿದರು.

ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ pOಡಿ ದುರಸ್ಥಿ, ನಮೂನೆ 3-9 ಮಿಸ್ ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಸುನೀಲ್ ಕುಮಾರ್, ಸರ್ವೇ ಇಲಾಖೆ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X