Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ 2.0 ತಂತ್ರಾಂಶದಿಂದ ಆಸ್ತಿ...

ಕಾವೇರಿ 2.0 ತಂತ್ರಾಂಶದಿಂದ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ : ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ5 March 2025 8:35 PM IST
share
ಕಾವೇರಿ 2.0 ತಂತ್ರಾಂಶದಿಂದ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ : ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‍ವೇರ್‌ ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2025ನೇ ಸಾಲಿನ ಆರಂಭದಲ್ಲಿ ಕಾವೇರಿ 2.0 ತಂತ್ರಾಂಶದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷದಿಂದ ಸೇವೆಯಲ್ಲಿ ವ್ಯತ್ಯಯವಾಗಿತ್ತು, ಸರಕಾರ ತುರ್ತಾಗಿ ಆ ಸಮಸ್ಯೆಯನ್ನು ಪರಿಹರಿಸಿದ್ದು, ಪ್ರಸ್ತುತ ಯಾವುದೇ ಸಮಸ್ಯೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದರು.

ತಂತ್ರಾಂಶವನ್ನು ಬಳಸುವ ಸಾರ್ವಜನಿಕರು ಹಾಗೂ ಅಧಿಕಾರಿಗಳು ನೀಡುವ ಸಲಹೆಗಳನ್ನು ಸಹ ಪರಿಗಣನೆಗೆ ತೆಗೆದುಕೊಂಡು ತಂತ್ರಾಂಶವನ್ನು ಮತ್ತಷ್ಟು ಬಳಕೆದಾರರ ಸ್ನೇಹಮಯಿಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ. ತಂತ್ರಾಂಶದ ಬಳಕೆ ಸುಲಭವಾಗಿ ಅರ್ಥವಾಗಲು ಸಹಾಯವಾಗುವಂತೆ ಸಹಾಯವಾಣಿ, ಟಿಕೆಟಿಂಗ್ ಟೂಲ್, ಸರ್ವೀಸ್ ಡೆಸ್ಕ್, ಅಪ್ಲಿಕೇಷನ್ ಸಪೋರ್ಟ್ ಇಂಜಿನಿಯರ್ ಹಾಗೂ ಸಿಸ್ಟಂ ಅಡ್ಮಿನ್, ಕಾವೇರಿ ಯೋಜನಾ ಉಸ್ತುವಾರಿ ಘಟಕ, ಸಿಎಸ್‍ಜಿಯಲ್ಲಿನ ಎಲ್2 ಸಾಫ್ಟ್‌ ವೇರ್ ವ್ಯವಸ್ಥೆ, ಯೂಟ್ಯೂಬ್ ಚಾನೆಲ್, ಪೋಸ್ಟರ್ ಹಾಗೂ ತರಬೇತಿಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಕಾವೇರಿ-2.0 ತಂತ್ರಾಂಶವು ನೂತನ ತಂತ್ರಾಂಶವಾಗಿದ್ದು, ಇದನ್ನು ಜೂನ್-2023 ರ ಅಂತ್ಯಕ್ಕೆ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ಅಳವಡಿಸಲಾಗಿರುತ್ತದೆ. ಈ ತಂತ್ರಾಂಶದಲ್ಲಿ ಪಬ್ಲಿಕ್ ಇಂಟರ್‌ ಫೇಸ್ ಇರುವುದರಿಂದ ಸಾರ್ವಜನಿಕರು ಆನ್‍ಲೈನ್ ಮುಖಾಂತರ ದಸ್ತಾವೇಜಿನ ನೋಂದಣಿಗೆ ಸಂಬಂಧಿಸಿದ ಶೇ.90ರಷ್ಟು ಕೆಲಸವನ್ನು ಪೂರ್ಣಗೊಳಿಸಿರುತ್ತಾರೆ. ತಂತ್ರಾಂಶದ ಕಾರ್ಯಾಚರಣೆಯಲ್ಲಿ ಸಾರ್ವಜನಿಕರ ಪಾತ್ರ ಹೆಚ್ಚಾಗಿರುವುದರಿಂದ ಪ್ರಾರಂಭದ ದಿನಗಳಲ್ಲಿ ತಂತ್ರಾಂಶವನ್ನು ಉಪಯೋಗಿಸುವಲ್ಲಿ ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳು ಕಂಡು ಬಂದಿದ್ದು, ಅವುಗಳನ್ನು ಕಾಲಕ್ರಮೇಣ ಪರಿಹರಿಸಲಾಗಿರುತ್ತದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X