Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆ‌ಎಸ್‌ಸಿಎ ಚುನಾವಣೆ ಗೊಂದಲಕ್ಕೆ ತೆರೆ;...

ಕೆ‌ಎಸ್‌ಸಿಎ ಚುನಾವಣೆ ಗೊಂದಲಕ್ಕೆ ತೆರೆ; ನಿವೃತ್ತ ನ್ಯಾ. ಸುಭಾಷ್‌ ಅಡಿ ಮೇಲ್ವಿಚಾರಣೆಯಲ್ಲಿ ಡಿ.7ರಂದು ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ21 Nov 2025 6:29 PM IST
share
ಕೆ‌ಎಸ್‌ಸಿಎ ಚುನಾವಣೆ ಗೊಂದಲಕ್ಕೆ ತೆರೆ; ನಿವೃತ್ತ ನ್ಯಾ. ಸುಭಾಷ್‌ ಅಡಿ ಮೇಲ್ವಿಚಾರಣೆಯಲ್ಲಿ ಡಿ.7ರಂದು ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಅವರನ್ನು ಚುನಾವಣಾ ಮೇಲ್ವಿಚಾರಕರನ್ನಾಗಿ ನೇಮಕ ಮಾಡಿದೆ.

ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿಗೆ ನವೆಂಬರ್ 30ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕೆಲವೊಂದು ಗೊಂದಲಗಳ ಹಿನ್ನೆಲೆಯಲ್ಲಿ ಡಿಸೆಂಬರ್ 30ರವರೆಗೆ ಮುಂದೂಡಿದ್ದ ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಕೆಎಸ್‌ಸಿಎ ಮತ್ತು ಬಿ.ಕೆ. ರವಿ ಎಂಬವರು ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ಇತ್ಯರ್ಥಪಡಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿತು.

ಹೈಕೋರ್ಟ್ ಆದೇಶ:

ಚುನಾವಣೆಯನ್ನು ಮುಂದೂಡಿ ನವೆಂಬರ್ 17ರಂದು ಚುನಾವಣಾಧಿಕಾರಿ ಹೊರಡಿಸಿದ್ದ ನೋಟಿಸ್‌ ರದ್ದುಪಡಿಸಲಾಗಿದೆ. ಕೆಎಸ್‌ಸಿಎ ಬೈಲಾ ಕುರಿತ ಯಾವುದೇ ವ್ಯಾಖ್ಯಾನದ ಪ್ರಭಾವಕ್ಕೆ ಒಳಗಾಗದೇ ಚುನಾವಣಾಧಿಕಾರಿ ಹಾಲಿ ಬೈಲಾ ಪ್ರಕಾರ ನ್ಯಾಯಯುತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಡಿಸೆಂಬರ್‌ 7ರಂದು ಬೆಳಗ್ಗೆ 11ರಿಂದ ಸಂಜೆ 7 ಗಂಟೆಯವರೆಗೆ ಮತದಾನವಾಗಬೇಕು. ಆನಂತರ, ಫಲಿತಾಂಶ ಪ್ರಕಟಿಸಬೇಕು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ. ಅಡಿ ಅವರನ್ನು ಚುನಾವಣೆಯ ಉಸ್ತುವಾರಿ ವಹಿಸಲು ಮನವಿ ಮಾಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.

ಈಗಾಗಲೇ ನಾಮಪತ್ರ ಸ್ವೀಕಾರವಾಗಿದ್ದು, ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಂದು ಸಂಜೆ 6 ಗಂಟೆಯೊಳಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಬೇಕು. ನವೆಂಬರ್‌ 26ರಂದು ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಬೇಕು. ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್‌ 26ರಂದು ಪ್ರಕಟಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಅರ್ಜಿಗಳನ್ನು ಇತ್ಯರ್ಥಪಡಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಜಯಕುಮಾರ್‌ ಎ. ಪಾಟೀಲ ಹಾಗೂ ಉದಯ್‌ ಹೊಳ್ಳ, ನವೆಂಬರ್ 17ರಂದು ಚುನಾವಣಾಧಿಕಾರಿ ಹೊರಡಿಸಿರುವ ಪತ್ರದ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿದೂಗಿಸಲು ಚುನಾವಣಾ ವೇಳಾಪಟ್ಟಿಯಲ್ಲಿ ಸ್ಪಲ್ಪ ಬದಲಾವಣೆ ಮಾಡಿ ಚುನಾವಣೆ ನಡೆಸಬೇಕು. ಚುನಾವಣೆ ಪ್ರಕ್ರಿಯೆ ಮೇಲ್ವಿಚಾರಣೆಗೆ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡಬೇಕು. ಚುನಾವಣೆ ವಿಳಂಬವಾದರೆ ಯಾವುದೇ ಪಂದ್ಯಾವಳಿಯಲ್ಲಿ ರಾಜ್ಯದ ತಂಡ ಭಾಗವಹಿಸಲು ಅನರ್ಹವಾಗುವ ಸಾಧ್ಯತೆ ಇರುತ್ತದೆ. ಅಲ್ಲದೇ, ಸೊಸೈಟಿ ಕಾಯ್ದೆಯ ಅನ್ವಯ ಸರಕಾರ ಆಡಳಿತಾಧಿಕಾರಿ ನೇಮಕ ಮಾಡಬಹುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಚುನಾವಣಾಧಿಕಾರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ. ಎನ್‌. ಫಣೀಂದ್ರ, ನ್ಯಾಯಾಲಯ ನಿಗದಿಪಡಿಸುವ ವೇಳಾಪಟ್ಟಿಗೆ ಅನುಗುಣವಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯ ಉಸ್ತುವಾರಿಯಲ್ಲಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X