Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. KSOU ಪ್ರಶ್ನೆ ಪತ್ರಿಕೆ ಮಾರಾಟ ಜಾಲ...

KSOU ಪ್ರಶ್ನೆ ಪತ್ರಿಕೆ ಮಾರಾಟ ಜಾಲ ಬೆಳಕಿಗೆ: ಇಬ್ಬರು ಹಂಗಾಮಿ ನೌಕರರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ26 Sept 2023 11:01 PM IST
share
KSOU ಪ್ರಶ್ನೆ ಪತ್ರಿಕೆ ಮಾರಾಟ ಜಾಲ ಬೆಳಕಿಗೆ: ಇಬ್ಬರು ಹಂಗಾಮಿ ನೌಕರರು ಪೊಲೀಸ್ ವಶಕ್ಕೆ

ಚಾಮರಾಜನಗರ, ಸೆ.26: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವ ಜಾಲ ಬೆಳಕಿಗೆ ಬಂದಿದ್ದು, ಚಾಮರಾಜನಗರ ಪ್ರಾದೇಶಿಕ ಕೇಂದ್ರದಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮುಕ್ತ ವಿವಿಯ ಚಾಮರಾಜನಗರ ಪ್ರಾದೇಶಿಕ ಕೇಂದ್ರದ ಇಬ್ಬರು ಹಂಗಾಮಿ ನೌಕರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣ ಪಡೆಯುತ್ತಿದ್ದ ಜಾಲವನ್ನು ಬಯಲಿಗೆಳೆದಿದ್ದಾರೆ.

ಚಾಮರಾಜನಗರ ಪ್ರಾದೇಶಿಕ ಕೇಂದ್ರದ ನೌಕರರು ವಾಟ್ಸ್ ಆ್ಯಪ್ ಮೂಲಕ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುತ್ತಿದ್ದರು ಎನ್ನಲಾಗಿದ್ದು, ಆನ್‌ಲೈನ್ ಮೂಲಕ ಹಣ ಪಡೆದ ಇವರು ಮತ್ತೊಬ್ಬರಿಗೆ ಹಣ ಸಂದಾಯ ಮಾಡುತ್ತಿದ್ದರು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಬಿ.ಕಾಂ ಅಂತಿಮ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವಾಗ ವಿದ್ಯಾರ್ಥಿ ಗಮನಿಸಿ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಗೆ ದೂರು ಕೊಟ್ಟಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ಸಂಬಂಧ ಈ ಹಿಂದೆ ಬಿಕಾಂ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಬಂಧಿತರಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೆ. 4ರಿಂದ ಪದವಿ ವಿಭಾಗದ ಪರೀಕ್ಷೆಗಳು ಆರಂಭವಾಗಿತ್ತು. ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಬಂಧಿತ ವಿದ್ಯಾರ್ಥಿಗಳು 3 ಸಾವಿರ ರೂ. ಪಡೆದು ವಾಟ್ಸ್ ಆ್ಯಪ್‌ಗೆ ಕಳುಹಿಸಿದ್ದರು. ಹೀಗಾಗಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಧೃಡಪಟ್ಟಿದ್ದು, ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಿದವರು ಯಾರು?. ಎಲ್ಲಿಂದ ಕಳುಹಿಸಲಾಗಿದೆ? ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ.

- ಮುತ್ತು ರಾಜ್, ಡಿಸಿಪಿ (ಕಾ-ಸು) ಮೈಸೂರು ನಗರ

---------------------------------------------------------------------

ಅಂತಿಮ ವರ್ಷದ ಬಿ.ಕಾಂ ಸೆಮಿಸ್ಟರ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ದೂರಿನ ಮೇರೆಗೆ ಜಯಲಕ್ಷ್ಮಿಪುರಂ ಪೊಲೀಸರು ಪರೀಕ್ಷಾಂಗ ಕೊಠಡಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಕೊನೆಯ ಸೆಮಿಸ್ಟರ್ ಪರೀಕ್ಷೆಯನ್ನು ಮತ್ತೆ ಮಾಡಲು ನಿರ್ಧರಿಸಲಾಗಿದೆ.

- ಪ್ರೊ.ಕೆ.ವಿ.ಪ್ರವೀಣ್ , ಕುಲಸಚಿವರು (ಪರೀಕ್ಷಾಂಗ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X