Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. KSRTC | ಖಾಲಿಯಿರುವ 13,000...

KSRTC | ಖಾಲಿಯಿರುವ 13,000 ಚಾಲಕ,ನಿರ್ವಾಹಕರ ನೇಮಕಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ23 Aug 2023 9:44 PM IST
share
KSRTC | ಖಾಲಿಯಿರುವ 13,000 ಚಾಲಕ,ನಿರ್ವಾಹಕರ ನೇಮಕಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ತುಮಕೂರು,ಆ.23: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ 13,000 ಚಾಲಕ/ನಿರ್ವಾಹಕರನ್ನು ನೇಮಕ ಮಾಡಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ದಾವಣಗೆರೆ ನಗರದಲ್ಲಿಂದು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ಕೆಎಸ್‍ಆರ್ ಟಿಸಿ ಬಸ್‍ನಿಲ್ದಾಣವನ್ನು ಪರಿಶೀಲಿಸಿ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸ್ಮಾರ್ಟ್ ಸಿಟಿ ಯೋಜನೆಯಡಿ 39,817 ಚ.ಮೀ. ಅಳತೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಉತ್ತರ ಕರ್ನಾಟಕದ ಎಲ್ಲಾ ಬಸ್ಸುಗಳು ತುಮಕೂರು ನಗರದ ಮೂಲಕ ವಾಗಿಯೇ ಸಂಚರಿಸುವುದರಿಂದ ನೂತನ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಸುಮಾರು 4.17 ಎಕರೆ ಪ್ರದೇಶದಲ್ಲಿ 111.46 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಬಸ್ ನಿಲ್ದಾಣ 2024ರ ಜನವರಿ ಮಾಹೆಯ ಅಂತ್ಯಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.

ಪ್ರಸ್ತುತ ಶೇಕಡಾ 78.10ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು,74.38 ಕೋಟಿ ರೂ. ಖರ್ಚಾಗಿದೆ.ಒಟ್ಟಾರೆ 9754.49 ಚ.ಮೀ.ಅಳತೆಯಲ್ಲಿ ಬೇಸ್‍ಮೆಂಟ್, 6292.331 ಚ.ಮೀ. ಅಳತೆಯಲ್ಲಿ ಲೋಯರ್ ಗ್ರೌಂಡ್ ಫ್ಲೋರ್, 5066.08 ಚ.ಮೀ. ಅಳತೆಯಲ್ಲಿ ಅಪ್ಪರ್ ಗ್ರೌಂಡ್ ಫ್ಲೋರ್, 3629.16 ಚ.ಮೀ. ಅಳತೆಯಲ್ಲಿ ಮೊದಲ/ಎರಡನೇ/ಮೂರನೇ ಮಹಡಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ನಗರದ ಈ ನೂತನ ಬಸ್ ನಿಲ್ದಾಣದಲ್ಲಿ ಲೋಯರ್ ಗ್ರೌಂಡ್ ಫ್ಲೋರ್‍ನಲ್ಲಿ 30 ಹಾಗೂ ಅಪ್ಪರ್ ಗ್ರೌಂಡ್ ಫ್ಲೋರ್‍ನಲ್ಲಿ 35 ಸೇರಿದಂತೆ ಒಟ್ಟು 65 ಬಸ್‍ಗಳು ನಿಲ್ಲಲು ಅವಕಾಶ ಕಲ್ಪಿಸಲಾಗಿದೆ.ಬೇಸ್‍ಮೆಂಟ್‍ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆಯಲ್ಲದೇ,ಮೇಲ್ಮಹಡಿಗಳಲ್ಲಿ ಕೆಎಸ್‍ಆರ್‍ಟಿಸಿ ಆಡಳಿತ ಕಚೇರಿ, ಶಾಪಿಂಗ್ ಮಾಲ್, ಕುಡಿಯುವ ನೀರು, ಶೌಚಾಲಯ, ಲಿಫ್ಟ್, ಮಳೆನೀರು ಕೋಯ್ಲು, ಮೆಡಿಕಲ್ ಸೆಂಟರ್, ಮುಂಗಡ ಟಿಕೇಟ್ ಕಾಯ್ದಿರಿಸುವ ಕೌಂಟರ್, ಕ್ಲಾಕ್ ರೂಂ, ಫೈರ್ ಸೇಫ್ಟಿ, ಮಹಿಳೆಯರಿಗಾಗಿ ರೆಸ್ಟ್ ರೂಂ, ಬೇಬಿ ಕೇರ್ ಕೊಠಡಿಗಳ ಸೌಕರ್ಯವನ್ನು ಕಲ್ಪಿಸಲಾಗಿದೆ.ಪ್ರಸ್ತುತ ಕಾರ್ಯಾಚರಣೆಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪ್ರದೇಶವನ್ನು ಮುಂದಿನ ಯೋಜನೆಗಳಿಗಾಗಿ ಕಾಯ್ದಿರಿಸುಲಾಗುವುದು. ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೊರೋನಾ ಸಂದರ್ಭದಲ್ಲಿ ಬಸ್ಸುಗಳ ಕಾರ್ಯಾಚರಣೆ ಸಂಖ್ಯೆ ಕಡಿಮೆಯಾಗಿದ್ದರಿಂದ ಈ ಪರಿಸ್ಥಿತಿ ಉಂಟಾಗಿದೆ. ಈ ಹಿಂದೆ 2016ರಲ್ಲಿ ಸಾರಿಗೆ ಸಚಿವರಾಗಿದ್ದಾಗ ಚಾಲಕ,ನಿರ್ವಾಹಕರನ್ನು ನೇಮಕಾತಿ ಮಾಡಲಾಗಿತ್ತು.ನಂತರ 7 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ.ಈ ನಿಟ್ಟಿನಲ್ಲಿ ಹೊಸ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ.ಅಲ್ಲದೇ 5000 ಹೊಸ ಬಸ್ಸುಗಳ ಖರೀದಿಗೆ ಮುಖ್ಯಮಂತ್ರಿಗಳು 500 ಕೋಟಿ ರೂ.ಗಳ ಅನುದಾನ ಒದಗಿಸಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರಕಾರದ ಆದೇಶದಂತೆ ರಾಜ್ಯದಲ್ಲಿ 15 ವರ್ಷ ಪೂರ್ಣಗೊಂಡ ಸರಕಾರಿ ವಾಹನ ಸೇರಿದಂತೆ ಎಲ್ಲಾ ವಾಹನಗಳನ್ನು ನೋಂದಣಿ ಮಡಲು ಅವಕಾಶವಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಪ್ರಾದೇಶಿಕ ಸಾರಿಗೆ ಇಲಾಖೆಯ ಎಲ್ಲಾ ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಶಾಸಕ ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಕೆ.ಎಸ್.ಆರ್.ಟಿ.ಸಿ. ಎಂ.ಡಿ. ಅನ್ಬುಕುಮಾರ್ ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X