Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ...

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ನಿರ್ವಾಹಕನನ್ನು ವಜಾ ಮಾಡಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 April 2025 8:39 PM IST
share
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ನಿರ್ವಾಹಕನನ್ನು ವಜಾ ಮಾಡಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಗುರುವಾರದಂದು ಮಂಗಳೂರು ವಿಭಾಗದ ಕೆಎಸ್ಸಾರ್ಟಿಸಿ ಬಸ್‍ನಲ್ಲಿ ನಿರ್ವಾಹಕರೊಬ್ಬರು ಮಹಿಳಾ ಪ್ರಯಾಣಿಕರೊಡನೆ ಕೆಟ್ಟದಾಗಿ ವರ್ತಿಸಿದ್ದು, ನಿರ್ವಾಹಕನ್ನು ಸೇವೆಯಿಂದ ವಜಾ ಮಾಡಲು ಕ್ರಮ ವಹಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಕೆಎಸ್ಸಾರ್ಟಿಸಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಕೆಟ್ಟದಾಗಿ ನಡೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿರ್ವಾಹಕನನ್ನು ಅಮಾನತ್ತು ಮಾಡಲಾಗಿದೆ. ಆದರೆ ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿ ಹೆಣ್ಣುಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೆಎಸ್ಸಾರ್ಟಿಸಿ ಬಸ್ಸು ಹಾಗೂ ಚಾಲಕ, ನಿರ್ವಾಹಕರ ಬಗ್ಗೆ ಸಾರ್ವಜನಿಕರು ನಂಬಿಕೆ ಮತ್ತು ಪ್ರೀತಿ ಹೊಂದಿರುತ್ತಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಮತ್ತು ಸಿಬ್ಬಂದಿಗಳ ಗೌರವಕ್ಕೆ ಧಕ್ಕೆ ತರುವಂತಹದು. ಹೀಗಾಗಿ ಮಂಗಳೂರು ವಿಭಾಗದ ನಿರ್ವಾಹಕನ ಅನುಚಿತ ವರ್ತನೆಯ ಬಗ್ಗೆ ಕೂಡಲೇ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದ ವಜಾ ಮಾಡಲು ಕ್ರಮ ವಹಿಸಬೇಕು ಎಂದು ಸಚಿವರು ಹೇಳಿದ್ದಾರೆ.

ಏನಿದು ಘಟನೆ :

ಮಂಗಳೂರು- ಮುಡಿಪು ಮಾರ್ಗವಾಗಿ ಸಂಚರಿಸುವ ಸರಕಾರಿ ಬಸ್ಸೊಂದರಲ್ಲಿ ನಿದ್ದೆಗೆ ಜಾರಿದ್ದ ಪ್ರಯಾಣಿಕ ಯುವತಿಯೊಬ್ಬಳ ಜೊತೆಗೆ ನಿರ್ವಾಹಕ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಹಿನ್ನಲೆಯಲ್ಲಿ ಬಾಗಲಕೋಟೆ ಮೂಲದ ಬಸ್ ನಿರ್ವಾಹಕ ಪ್ರದೀಪ್ ಎಂಬಾತನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದರು.

ಬುಧವಾರ ಮುಡಿಪುವಿನಿಂದ ಮಂಗಳೂರಿಗೆ ಈ ಸರಕಾರಿ ಬಸ್ ಸಂಚರಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಬಸ್ ನಿರ್ವಾಹಕ ಪ್ರದೀಪ್ ಪ್ರಯಾಣದ ವೇಳೆ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳನ್ನು ಖಾಸಗಿ ಭಾಗವನ್ನು ಸ್ಪರ್ಶಿಸಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಸಹ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X