Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. KSRTC | ಶೀಘ್ರದಲ್ಲೇ ರಸ್ತೆಗೆ ಇಳಿಯಲಿವೆ...

KSRTC | ಶೀಘ್ರದಲ್ಲೇ ರಸ್ತೆಗೆ ಇಳಿಯಲಿವೆ ಹೊಸ ಮಾದರಿಯ ಪ್ರೊಟೊ ಟೈಪ್‌ ಬಸ್‌ಗಳು!

ವಾಹನ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ21 Aug 2023 10:27 PM IST
share
KSRTC | ಶೀಘ್ರದಲ್ಲೇ ರಸ್ತೆಗೆ ಇಳಿಯಲಿವೆ ಹೊಸ ಮಾದರಿಯ ಪ್ರೊಟೊ ಟೈಪ್‌ ಬಸ್‌ಗಳು!

ಬೆಂಗಳೂರು, ಆ. 21: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ‘ಪಾಯಿಂಟ್ ಟು ಪಾಯಿಂಟ್’ ಮತ್ತು ವೇಗದೂತ ಕಾರ್ಯಾಚರಣೆಗೆ ನಿಯೋಜಿಸಲಾಗುವ ನೂತನ ಕರ್ನಾಟಕ ಸಾರಿಗೆ ವಾಹನದ ಪ್ರೊಟೊ ಟೈಪ್ ವಾಹನ ವಿನ್ಯಾಸವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲನೆ ನಡೆಸಿದರು.

ಸೋಮವಾರ ಇಲ್ಲಿನ ಶಾಂತಿನಗರದಲ್ಲಿನ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ನೂತನ ವಾಹನ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಪ್ರಸ್ತುತ ಇಂದು ಪರಿಶೀಲಿಸಲಾದ ಪ್ರೊಟೊ ಟೈಪ್ ವಾಹನವು ಪಾಯಿಂಟ್ ಟು ಪಾಯಿಂಟ್ ಮತ್ತು ವೇಗದೂತ ವಾಹನವನ್ನಾಗಿ ಉಪಯೋಗಿಸಲಿದ್ದು, ಮುಂಬರುವ ಎಲ್ಲ ಹೊಸ ಬಸ್ಸುಗಳು ಈ ರೀತಿಯ ವಿನ್ಯಾಸ ವನ್ನು ಹೊಂದಲಿದೆ’ ಎಂದು ಹೇಳಿದರು.

‘ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ವಾಹನಗಳನ್ನು ಕಾರ್ಯಾಚರಣೆಗೊಳಿಸಿ, ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲ ಬದಲಾವಣೆಗಳನ್ನು ತರಲಾಗಿದೆ ಹಾಗೂ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಒಂದು ತಿಂಗಳ ಅವಧಿಯಲ್ಲಿ ಹೊಸ ಬಸ್ಸುಗಳು ಬರಲಿದ್ದು, ಎಲ್ಲ ಹೊಸ ವಾಹನಗಳು ಈ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ ಎಂದು ಅವರು ಮಾಹಿತಿ ನೀಡಿದರು.

ನೂತನವಾಗಿ ಕಾರ್ಯಾಚರಣೆಗೆ ನಿಯೋಜಿಸಲಾಗುವ ಈ ಸಾರಿಗೆ ವಾಹನವನ್ನು ಮೆ.ಕೆಎಂಎಸ್ ಕೋಚ್ ಬಿಲ್ಡರ್ಸ್ ನಿರ್ಮಾಣ ಮಾಡಿದ್ದಾರೆ. ಇದು ಈ ಕೆಳಕಂಡ ವಿಶಿಷ್ಟತೆಗಳನ್ನು ಹೊಂದಿರುತ್ತದೆ. ‘ವಾಹನದ ಎತ್ತರ-3420 ಮಿ.ಮಿ., ಆಸನಗಳ ಸಂಖ್ಯೆ-52, ಪ್ರಯಾಣಿಕರ ಆಸನ-ಬಕೆಟ್ ಟೈಪ್, ವಾಹನದ ಮುಂದಿನ/ಹಿಂದಿನ ಗಾಜು ವಿಶಾಲವಾಗಿರುತ್ತದೆ’ ಎಂದು ಸಂಸ್ಥೆ ತಿಳಿಸಿದೆ.

‘ಪ್ರಯಾಣಿಕರ ಕಿಟಕಿ ಪ್ರೇಮ್ ಹಾಗೂ ಮೇಲಿನ ಗಾಜು ವಿಶಾಲವಾಗಿರುತ್ತದೆ. ಕಿಟಕಿ ಗಾಜು ದೊಡ್ಡ ಟಿಂಟೆಡ್ ಗಾಜುಗಳು. ವಾಹನದ ಒಳಾಂಗಣದ ಲಗೇಜ್ ಕ್ಯಾರಿಯರ್-ವಿನೂತನ ವಿನ್ಯಾಸ. ಒಳಾಂಗಣದ ದೀಪ ಸತತವಾದ ಎಲ್‍ಇಡಿ ದೀಪ. ಹಿಂದಿನ/ಮುಂದಿನ ಮಾರ್ಗ ಎಲ್‍ಇಡಿ ಮಾರ್ಗ ಫಲಕ ಅಳವಡಿಕೆ. ಪ್ರಯಾಣಿಕರ ಬಾಗಿಲು-ಸ್ವಯಂಚಾಲಿತ ಸೆನ್ಸ್ರ್ರ್ ಮತ್ತು ತುರ್ತು ಬಟನ್ ವ್ಯವಸ್ಥೆ. ವಾಹನದ ಮುಂಭಾಗ ವಿನೂತನ ಆರ್ಕಷಕ ವಿನ್ಯಾಸ ದೊಡ್ಡ ಗ್ಲಾಸ್. ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲಿದೆ. ಆಸನಗಳ ಮಧ್ಯೆ ಸ್ಥಳಾವಕಾಶವನ್ನು ಹೆಚ್ಚಿಸಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X