Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನರ ರಕ್ತ ಹೀರುತ್ತಿರುವ ಮೈಕ್ರೋ...

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಿ : ಕುಮಾರಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jan 2025 9:35 PM IST
share
ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಿ : ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ನಗರದಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಕಿಡಿಗೇಡಿ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನನ್ನ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರೋಪಾಯ ಏನು? ಎಂಬ ಬಗ್ಗೆ ನಾನು ಆಗ ಆಲೋಚನೆ ಮಾಡಿದ್ದೆ. ಆ ಸಂದರ್ಭದಲ್ಲಿ ಕೇರಳ ಸರಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಆ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದೆ. ಆಮೇಲೆ ಅದು ಏನಾಯಿತು? ಎಂದು ಅವರು ಪ್ರಶ್ನಿಸಿದರು.

ನನ್ನ ಸರಕಾರ ಹೋದ ನಂತರ ಬಂದ ಸರಕಾರಗಳು ಈ ಕಾಯ್ದೆಯ ಮಹತ್ವವನ್ನೇ ಅರಿತುಕೊಳ್ಳಲಿಲ್ಲ. ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್ ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಅಥವಾ ಅನುಮತಿಯನ್ನೇ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡಿ ಹೋಗುವ ದುಸ್ಥಿತಿ ಸೃಷ್ಟಿಯಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಜನರು ಹಳ್ಳಿಗಳನ್ನು ಬಿಟ್ಟಿದ್ದರು. ಮನೆಗಳಿಗೆ ಬೀಗ ಹಾಕಿ ಸಾಲಗಾರರಿಂದ ತಪ್ಪಿಸಿಕೊಂಡರೆ ಸಾಕು ಎನ್ನುವ ಭೀತಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇಪದೆ ಹೇಳುತ್ತಾರೆ, ನಾನು ಇಪ್ಪತ್ತು ಸಲವೋ ಮೂವತ್ತು ಸಲವೋ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ? ಅವರನ್ನು ಗಟ್ಟಿ ಮಾಡಲಿಕ್ಕೆ ಏನು ಮಾಡಿದ್ದೀರಿ? ಅದು ನನ್ನ ಪ್ರಶ್ನೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹಾಡಹಗಲೇ ಬ್ಯಾಂಕ್ ಗಳಿಗೆ ನುಗ್ಗಿ ಲೂಟಿ ಮಾಡಲಾಗುತ್ತಿದೆ. ಎಟಿಎಂ ಗಳಿಗೆ ಹಣ ತುಂಬುವ ಸಿಬ್ಬಂದಿಯನ್ನು ಗುಂಡಿಟ್ಟು ಕೊಂದು ಹಗಲಲ್ಲೇ ಹಣ ದೋಚಿ ನೆರೆ ರಾಜ್ಯಕ್ಕೆ ಪರಾರಿ ಆಗುವುದು ಹೀಗೆ, ಅಪರಾಧ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ನನಗೇನು ಸಂಬಂಧ ಇಲ್ಲವೆಂದು ಗೃಹ ಸಚಿವರು ಹೇಳಿದರೆ ಅರ್ಥವೇನು? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X