Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು...

ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Jan 2024 4:09 PM IST
share
ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,“ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ” ಎಂದು ಹೇಳಿದರು.

ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ

“ ಮಂಡ್ಯದಲ್ಲಿ ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ನಮ್ಮ ಭಾಗದ ಎಲ್ಲಾ ಜಾತಿ ಹಾಗೂ ಧರ್ಮದ ಜನರು ಬಹಳ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದರು. ನಮ್ಮ ಕಡೆ ಊರ ಹಬ್ಬ ಮಾಡುವಾಗ ಯಾವರೀತಿ ಮಾಡುತ್ತಾರೆ ಎಂದು ನೀವು ನೋಡಿದ್ದೀರಲ್ಲಾ? ಈಗ ಅವರು ಹೊಸ ಪ್ರಯೋಗ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ಪಂಚಾಯ್ತಿಯವರು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಮಾತ್ರ ಹಾರಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ರಾಷ್ಟ್ರ ಧ್ವಜ ಹಾಗೂ ಕನ್ನಡ ಬಾವುಟಕ್ಕೆ ಗೌರವ ನೀಡಬೇಕು. ಕನ್ನಡದಲ್ಲೇ ನಾಮಫಲಕ ಇರಬೇಕು ಎಂದೂ ನಾವು ಕಾನೂನು ಮಾಡಿದ್ದೇವೆ. ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಹುದಾಗಿತ್ತು, ಆದರೆ ಅವರು ವಿಧಾನ ಮಂಡಲ ಅಧಿವೇಶನದಲ್ಲೇ ಜಾರಿ ಮಾಡಲು ಹೇಳಿದ್ದಾರೆ. ರಾಷ್ಟ್ರ ಧ್ವಜ, ಸಂವಿಧಾನಕ್ಕೆ ಏನು ಗೌರವ ನೀಡಬೇಕೋ ಆ ಗೌರವ ನೀಡುವುದು ನಮ್ಮ ಬದ್ಧತೆ. ಜನ ಎಲ್ಲವನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ” ಎಂದು ತಿಳಿಸಿದರು.

ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ?

ಬಿಜೆಪಿಯವರು ಮನೆ, ಮನೆಗೆ ಹನುಮಧ್ವಜ ಹಂಚುವ ಬಗ್ಗೆ ಕೇಳಿದಾಗ, “ಬೇಡ ಎಂದು ಹೇಳಿದವರು ಯಾರು? ಬಿಜೆಪಿಯವರು ಹರ್ ಘರ್ ತಿರಂಗಾ ಎಂದು ಪ್ರಚಾರ ಮಾಡಿದ್ದರು. ಈಗ ಆ ತಿರಂಗಾವನ್ನು ಯಾಕೆ ಮರೆತಿದ್ದಾರೆ? ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ತಿರಂಗಾ ಬದಲಿಗೆ ಕೇಸರಿ ಧ್ವಜವನ್ನೇ ಕಾನೂನು ಮೂಲಕ ತರಲಿ, ಬೇಡ ಎಂದವರು ಯಾರು?” ಎಂದು ಛೇಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X