Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮ್ಮ ಸರಕಾರ ತೆಗೆದವರನ್ನೇ ತಬ್ಬಿಕೊಳ್ಳುವ...

ತಮ್ಮ ಸರಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Sept 2023 8:27 PM IST
share
ತಮ್ಮ ಸರಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ.15: ತಮ್ಮ ಸರಕಾರ ಉರುಳಿಸಿದವರನ್ನೇ ಜೊತೆಯಲ್ಲೆ ಕೂರಿಸಿಕೊಂಡು ಈಗಿನ ಸರಕಾರದ ವಿರುದ್ಧ ಪ್ರತಿಭಟನೆ ಮಾಡುವ ಹಾಗೂ ಅವರನ್ನು ತಬ್ಬಿಕೊಳ್ಳುವ ದುಸ್ಥಿತಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇಳಿದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ನಡೆದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್ ನವರು ಮೈತ್ರಿ ಆದರೂ ಮಾಡಿಕೊಳ್ಳಲಿ, ಏನನ್ನಾದರೂ ಜೋಡಿಸಿಕೊಳ್ಳಲಿ, ಅದು ನಮಗೆ ಸಂಬಂಧಪಟ್ಟಿದ್ದಲ್ಲ. ನಾನು ಅನೇಕ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರನ್ನು ಮೈತ್ರಿ ಬಗ್ಗೆ ಕೇಳಿದೆ. ಅದಕ್ಕೆ ಅವರು ‘ನಮ್ಮ ಸರಕಾರ ಬೀಳಿಸಿದವರ ಹತ್ತಿರವೆ ಕುಮಾರಸ್ವಾಮಿ ಅವರಿಗೆ ಮತ್ತೆ ಏಕೆ ನೆಂಟಸ್ತನ? ಹಾಗಾದರೆ ಪಕ್ಷದ ನೀತಿ ಏನು? ನಾವು ಕಾರ್ಯಕರ್ತರಿಗೆ ಏನು ಹೇಳುವುದು ಎಂದು ಕೇಳುತ್ತಿದ್ದಾರೆ, ನಮಗೆ ಉತ್ತರ ನೀಡಲು ಆಗುತ್ತಿಲ್ಲ’ ಎಂದು ಹೇಳುತ್ತಿದ್ದಾರೆ. ವಿರೋಧ ಪಕ್ಷಗಳಿಗೆ ನಾವು ಉತ್ತರ ಕೊಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದರು.

ಚುನಾವಣೆ ಮುಗಿದು 110 ದಿನಗಳಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದ ದುಸ್ಥಿತಿಗೆ ಬಿಜೆಪಿ ಪಕ್ಷ ಬಂದಿದೆ. ಅವರವರ ಅನುಕೂಲಕ್ಕೆ ಬಿಜೆಪಿ-ಜೆಡಿಎಸ್ ರಾಜಕಾರಣ ಮಾಡುತ್ತಿವೆ. ಯಾರ ವಯಸ್ಸೂ ಕಡಿಮೆಯಾಗುವುದಿಲ್ಲ, ದೊಡ್ಡ-ದೊಡ್ಡ ನಾಯಕರು ಮೇಲೆಯೇ ಕುಳಿತಿರುತ್ತಾರೆ. ಕಾರ್ಯಕರ್ತರು ಹಾಗೂ ಮುಖಂಡರು ನೆಲದಲ್ಲೆ ಕುಳಿತಿರುತ್ತಾರೆ ಎಂದು ಶಿವಕುಮಾರ್ ತಿಳಿಸಿದರು.

ಈ ಭಾರತ್ ಜೋಡೊ ಸಭಾಂಗಣದಲ್ಲಿ ಎಲ್ಲ ಮನಸ್ಸುಗಳು ಒಂದಾಗುತ್ತಿವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಕಾಂಗ್ರೆಸ್ ಪಕ್ಷ ನಿಮ್ಮನ್ನು ನಡೆಸಿಕೊಳ್ಳುತ್ತದೆ. ತಾಳ್ಮೆಯಿಂದ ಇದ್ದರೆ ನಿಮಗೂ ಒಂದಲ್ಲ ಒಂದು ದಿನ ಸೂಕ್ತ ಸ್ಥಾನಮಾನ ದೊರೆಯುತ್ತದೆ. ಸಾಕಷ್ಟು ಸಮಿತಿಗಳು, ನಿಗಮ ಮಂಡಲಿಗಳು ಇದ್ದಾವೆ, ಅವಸರ ಬೇಡ ಎಂದು ಅವರು ಹೇಳಿದರು.

2028ರಲ್ಲಿ ಪದ್ಮನಾಭನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುತ್ತಾರೆ. ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ವಿಶ್ವ ಪ್ರಜಾಪ್ರಭುತ್ವ ದಿನ ಸಾಕ್ಷಿಯಾಗಿದೆ. ಸಂಘಟನೆ ಮಾಡುವುದು, ಪಕ್ಷ ಕಟ್ಟುವುದು ಅತ್ಯಂತ ಕಷ್ಟದ ಕೆಲಸ. ಇಂದು ಪಕ್ಷ ಸೇರಿದವರು ಬೆಂಗಳೂರಿನಲ್ಲಿ ಹಾಗೂ ಪದ್ಮನಾಭನಗರದಲ್ಲಿ ದೊಡ್ಡ ಸಂಘಟನಾ ಶಕ್ತಿಗಳು. ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಸೇರಿರುವ ನಿಮ್ಮ ನಿರ್ಧಾರ ಸರಿಯಾಗಿದೆ ಎಂದು ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಪಕ್ಷ ಸೇರುವವರನ್ನು ತಡೆದರು, ಅಡ್ಡಿಪಡಿಸಿದರು. ಈಗ ಬಿಜೆಪಿಗೆ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಅಶೋಕಣ್ಣನಿಗೆ(ಆರ್.ಅಶೋಕ್)ಅನೇಕ ಕ್ಷೇತ್ರಗಳು ಇದ್ದವು ಅಲ್ಲೆ ಎಲ್ಲಾದರೂ ನಿಲ್ಲಬಹುದಿತ್ತು, ಯಾಕೋ ಇಲ್ಲೇ ಬಂದು ನಿಂತು ನಿಷ್ಠಾವಂತ ಕಾರ್ಯಕರ್ತರ ಬೆಳವಣಿಗೆಗೆ ಅಡ್ಡಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ. ಕನಕಪುರದಿಂದ ಬಂದು ನೆಲೆ ನಿಂತಿರುವ 35 ಸಾವಿರ ಮತದಾರರು ಕ್ಷೇತ್ರದಲ್ಲಿ ಇದ್ದಾರೆ. ನಾವೆಲ್ಲಾ ಒಟ್ಟಿಗೆ ಸೇರೋಣ, ಚರ್ಚೆ ಮಾಡೋಣ, ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು.

ಗ್ಯಾರಂಟಿಗಳು ಬಿಜೆಪಿಗೆ ಏಟು ಕೊಟ್ಟಿದೆ. ನಿನ್ನೆ ರಾಜಸ್ಥಾನದಲ್ಲಿ ಅನೇಕ ರಾಜ್ಯಗಳ ನಾಯಕರು ಹೇಳುತ್ತಿದ್ದರು ಡಿ.ಕೆ.ಶಿವಕುಮಾರ್ ಅವರೆ ನೀವು ಕರ್ನಾಟಕದಲ್ಲಿ ಕೊಟ್ಟ ಗ್ಯಾರಂಟಿ ಏಟು ಬಿಜೆಪಿ ಮುಟ್ಟಿ ನೋಡಿಕೊಳ್ಳುವಂತೆ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ದೇಶ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಹೇಳುತ್ತಾ ಇದ್ದರು, ಈಗ ಬಿಜೆಪಿ ಆಡಳಿತವಿರುವ ರಾಜ್ಯಗಳು ಕರ್ನಾಟಕ ಮಾದರಿಯನ್ನು ಅನುಕರಿಸುತ್ತಿವೆ ಎಂದು ಶಿವಕುಮಾರ್ ಹೇಳಿದರು.

ಇಡೀ ದೇಶದಲ್ಲಿ ಯಾರೂ ನಮ್ಮಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಆಗುವುದಿಲ್ಲ, ಮಹಿಳೆಯರ ಸಬಲೀಕರಣಕ್ಕೆ ದೊಡ್ಡ ಹೆಜ್ಜೆ ಇದಾಗಿದೆ. ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಅಧಿಕಾರದಲ್ಲಿ ಇರುವ ತನಕ ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X