Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕುಮಾರಸ್ವಾಮಿಯವರ ‘ಪೆನ್‍ಡ್ರೈವ್’...

ಕುಮಾರಸ್ವಾಮಿಯವರ ‘ಪೆನ್‍ಡ್ರೈವ್’ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಲೇವಡಿ

ವಾರ್ತಾಭಾರತಿವಾರ್ತಾಭಾರತಿ8 July 2023 9:05 PM IST
share
ಕುಮಾರಸ್ವಾಮಿಯವರ ‘ಪೆನ್‍ಡ್ರೈವ್’ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಲೇವಡಿ

ಬೆಳಗಾವಿ, ಜು.8: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪೆನ್‍ಡ್ರೈವ್ ಬಿಡುಗಡೆ ಮಾಡಲು ಸೂಕ್ತ ಸಮಯ, ಮುಹೂರ್ತ ಕೂಡಿ ಬರಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರಕಾರ ಬಂದಾಗ ವರ್ಗಾವಣೆ ಸ್ವಾಭಾವಿಕ. ಕುಮಾರಸ್ವಾಮಿ ಅವರ ಪೆನ್‍ಡ್ರೈವ್‍ನಲ್ಲಿ ಏನಿದೆ ಎಂಬುದು ಹೊರಗೆ ಬಂದರೆ ಮಾತ್ರ ಗೊತ್ತಾಗುತ್ತೆ. ಪೆನ್‍ಡ್ರೈವ್ ಅವರ ಕಡೆಗೆ ಇದೆ. ಅದನ್ನು ಪ್ಲೇ ಮಾಡುವುದು, ಸಾಬೀತು ಮಾಡುವುದು ಅವರ ವಿವೇಚನೆಗೆ ಬಿಟ್ಟಿದ್ದು. ಅದಕ್ಕೆ ಅವರು ಸ್ವತಂತ್ರರು ಎಂದರು.

ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಆದರೆ, ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು ವಿರೋಧ ಮಾಡುತ್ತಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಕೊಟ್ಟು, ಹೊಸ ಯೋಜನೆ ಘೋಷಣೆ ಮಾಡಲಾಗಿದೆ. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ. ಈ ಬಜೆಟ್ ಸರಕಾರಕ್ಕೆ, ಪಕ್ಷಕ್ಕೆ ಅನುಕೂಲ ಆಗಲಿದೆ ಎಂದು ಅವರು ಹೇಳಿದರು.

ಪ್ರಾದೇಶಿಕ ಆಯುಕ್ತರು, ನಗರ ಪೊಲೀಸ್ ಆಯುಕ್ತರಂತ ಹುದ್ದೆಗಳಿಗೆ ಬೆಂಗಳೂರು ಬಿಟ್ಟು ಬೆಳಗಾವಿಗೆ ಬರಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಹಿಂದೇಟು ಏನಿಲ್ಲ. ಬೆಂಗಳೂರು ಬಿಟ್ಟು ಅವರು ಬರಬೇಕಷ್ಟೇ. ಬಹಳಷ್ಟು ಜನ ಬೆಂಗಳೂರಿನಲ್ಲಿ ಇರಲು ಇಷ್ಟ ಪಡುತ್ತಾರೆ. ಆದರೆ, ನೌಕರಿ ಮಾಡಲು ರಾಜ್ಯದ ಎಲ್ಲಿಗೆ ಆದರೂ ಅವರು ಹೋಗಲೇಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದರು.

Tags

KumaraswamySatish Jarakiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X