Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗುತ್ತಿಗೆ ಅವ್ಯವಹಾರದ ತನಿಖಾ ವರದಿ |...

ಗುತ್ತಿಗೆ ಅವ್ಯವಹಾರದ ತನಿಖಾ ವರದಿ | ಕ್ರಮದ ಬಗ್ಗೆ ಸಿಎಂ, ಸಂಪುಟ ನಿರ್ಧಾರ : ಲಕ್ಷ್ಮೀ ಹೆಬ್ಬಾಳ್ಕರ್‌

ವಾರ್ತಾಭಾರತಿವಾರ್ತಾಭಾರತಿ13 March 2025 3:06 PM IST
share
ಗುತ್ತಿಗೆ ಅವ್ಯವಹಾರದ ತನಿಖಾ ವರದಿ | ಕ್ರಮದ ಬಗ್ಗೆ ಸಿಎಂ, ಸಂಪುಟ ನಿರ್ಧಾರ : ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು, ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಸಚಿವ ಸಂಪುಟ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ, ಅದರಲ್ಲೂ ಪಿಎಸ್‌ಐ ನೇಮಕಾತಿ, ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ ಖರೀದಿ, ಹೀಗೆ ಸಾಕಷ್ಟು ಹಗರಣಗಳು ನಡೆದಿದ್ದು, ಇವೆಲ್ಲದರ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರು ಸಮಗ್ರ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಿದ್ದಾರೆ. ವರದಿಯು ಸಚಿವ ಸಂಪುಟದ ಮುಂದೆ ಚರ್ಚೆ ಆಗಲಿದೆ. ಮುಖ್ಯಮಂತ್ರಿಯವರು ಮತ್ತು ಸಚಿವ ಸಂಪುಟ ಮುಂದೆ ನಿರ್ಧಾರ ಕೈಗೊಳ್ಳುತ್ತದೆ, ಅದರ ಮೇಲೆ ಕ್ರಮ ಆಗಲಿದೆ ಎಂದು ಹೇಳಿದರು.

ನಟಿ ರನ್ಯಾ ರಾವ್‌ ಕೇಸ್; ಶಾಮೀಲಾಗಿದ್ದರೆ ಯಾರನ್ನೂ ಬಿಡುವುದಿಲ್ಲ :

ರನ್ಯಾ ರಾವ್‌ ಕೇಸ್ ಸಿಐಡಿ ವಿಚಾರಣೆ ವಾಪಸ್ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಟಿ ರನ್ಯಾ ರಾವ್‌ ಕೇಸಿನ ಬಗ್ಗೆ ಮಾಧ್ಯಮದವರು (ನೀವು) ಏನ್ನೆಲ್ಲ ತೋರಿಸುತ್ತಿದ್ದೀರೋ ಅಷ್ಟೇ ನಮಗೆ ಗೊತ್ತು. ನನ್ನ ಇಲಾಖೆಯಲ್ಲೇನು ಇಂಟೆಲಿಜೆನ್ಸಿ ಇಲ್ಲ. ಮುಖ್ಯಮಂತ್ರಿಯವರು ಮತ್ತು ಗೃಹಮಂತ್ರಿಯವರಿಗೆ ಈ ಪ್ರಕರಣದ ಬಗ್ಗೆ ಸವಿಸ್ತಾರವಾಗಿ ಗೊತ್ತು. ಈ ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ದರೂ ಕೂಡ ತನಿಖೆಯಿಂದ ಹೊರಬೀಳುತ್ತದೆ. ನಂತರದಲ್ಲಿ ಏನೆಲ್ಲ ಕ್ರಮ ಎನ್ನುವುದು ನಿರ್ಧಾರವಾಗುತ್ತದೆ ಎಂದರು.

ಮೀಸಲಾತಿ ಕೇಳುವ ಅಧಿಕಾರ ಎಲ್ಲರಿಗೂ ಇದೆ :

ಮುಸ್ಲಿಮರು ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿರುವ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ನಾವು ಪಂಚಮಸಾಲಿಗಳು 2ಎ ಕೇಳುತ್ತಿದ್ದೇವೆ. ಬೇರೆಯವರು ಬೇರೆ ಮೀಸಲಾತಿ ಕೇಳುತ್ತಿದ್ಧಾರೆ. ಕೇಳುವಂತಹ ಅಧಿಕಾರ, ಹಕ್ಕು ಎಲ್ಲರಿಗೂ ಇರುತ್ತದೆ ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X