Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನ.28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ,...

ನ.28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್‍ಗೆ ಚಾಲನೆ : ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ19 Nov 2025 7:04 PM IST
share
ನ.28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್‍ಗೆ ಚಾಲನೆ :  ಲಕ್ಷ್ಮೀ ಹೆಬ್ಬಾಳ್ಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್ ಹಾಗೂ ಅಕ್ಕ ಪಡೆಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಬುಧವಾರ ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಕರೆ ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ದೇಶಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರಕಾರ ಅಂತ ಅರ್ಥ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇಂದಿರಾ ಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ: ಇಡೀ ದೇಶವೆ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ ಸಿಗಬೇಕು. ಪೌಷ್ಠಿಕ ಆಹಾರದ ಜೊತೆಗೆ ಶಿಕ್ಷಣ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅಂಗನವಾಡಿ ಆರಂಭಿಸಿದರು ಎಂದು ಅವರು ತಿಳಿಸಿದರು.

ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‍ಕೆಜಿ, ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

2028ಕ್ಕೆ ನಮ್ಮದೆ ಸರಕಾರ: ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರಥ್ಯದ ನಮ್ಮ ಸರಕಾರ ಗ್ಯಾರಂಟಿ ಸರಕಾರ ಆಗಿದ್ದು, 2028ಕ್ಕೂ ನಮ್ಮದೆ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500 ರೂ.ಗಳಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದು ಅವರು ಟೀಕಿಸಿದರು.

ಗೌರವ ಧನ ಹೆಚ್ಚಳವೆ ಮತ್ತೊಂದು ಗ್ಯಾರಂಟಿ: ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೆ ನಮ್ಮ ಸರಕಾರದ ಮತ್ತೊಂದು ಗ್ಯಾರಂಟಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು.

ಜಿಲ್ಲೆಯಿಂದ 2.50 ಲಕ್ಷಕ್ಕೂ ಹೆಚ್ಚು ಷೇರುದಾರರ ಗುರಿ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2.80 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಈ ಪೈಕಿ ಕನಿಷ್ಠ 2.50 ಲಕ್ಷ ಫಲಾನುಭವಿಗಳನ್ನು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಷೇರುದಾರರನ್ನಾಗಿ ಮಾಡಬೇಕು. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಅದೇ ರೀತಿ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಮನೆ ಮನೆ ತಲುಪುವಂತಾಗಬೇಕು ಎಂದು ಅವರು ಕರೆ ನೀಡಿದರು.

ಬೆಂಗಳೂರು ದಕ್ಷಿಣದ ಜನರು ರಾಜಕೀಯವಾಗಿ ಪ್ರಬುದ್ಧರು: ಓರ್ವ ಪ್ರಧಾನಮಂತ್ರಿ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟ ಕೀರ್ತಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲೆಯ ಜನ ರಾಜಕೀಯವಾಗಿ ಸಾಕಷ್ಟು ಪ್ರಬುದ್ಧರು. ಮನೆ ಮನೆಗಳಲ್ಲಿ ನಾಯಕರಿದ್ದಾರೆ. ಅಂತ ನಾಯಕರು ಬೆಳೆಯಲು ತಾಯಂದಿರ ಶ್ರಮವೆ ಪ್ರಮುಖ ಕಾರಣ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನುಡಿದರು.

ಈ ವೇಳೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ರಾಜು, ರೇಶ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಇಲಾಖೆಯ ಉಪ ನಿರ್ದೇಶಕ ದಿನೇಶ್ ಜೆ.ಆರ್. ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X