Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲ್ಯಾಂಡ್ ಬ್ಯಾಂಕ್ ಸ್ಥಾಪನೆಗೆ...

ಲ್ಯಾಂಡ್ ಬ್ಯಾಂಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 May 2025 8:50 PM IST
share
ಲ್ಯಾಂಡ್ ಬ್ಯಾಂಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು ಲ್ಯಾಂಡ್ ಬ್ಯಾಂಕ್ ಸ್ಥಾಪನೆ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆಯಲ್ಲಿ ಅವರು, ಗ್ರಾಮ ನಕ್ಷೆ ಹೊಂದಿರದ ಗ್ರಾಮಗಳಿಗೆ ಗ್ರಾಮ ನಕ್ಷೆ ರಚನೆ ಕುರಿತಂತೆಯೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದೂ ಅವರು ಉಲ್ಲೇಖಿಸಿದರು.

ಅದೇ ರೀತಿ, ತಾಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು. ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಸಂವಿಧಾನದ (73)(74) ರನ್ವಯ ಗ್ರಾಮ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ. ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅದೇ ರೀತಿ, ಗ್ರಾಮ ಹಾಗೂ ಸ್ಥಳೀಯ ಸಂಸ್ಥೆ ಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದ ಅವರು, ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು, ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಹೇಳಿದರು.

ಸಂವಿಧಾನದ 73ನೆ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ. ಎರಡನೆ ಹಂತದಲ್ಲಿ ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು ಆಗಸ್ಟ್ 15ರೊಳಗೆ ಪೂರ್ಣ ಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, 5ನೆ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X