Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಂದಾಲ್ ಕಂಪನಿಗೆ ಭೂಮಿ | ಹಿಂದಿನ...

ಜಿಂದಾಲ್ ಕಂಪನಿಗೆ ಭೂಮಿ | ಹಿಂದಿನ ಬಿಜೆಪಿ ಸರಕಾರದ ತೀರ್ಮಾನವೇ ಜಾರಿ : ಎಂ.ಬಿ.ಪಾಟೀಲ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ25 Aug 2024 5:02 PM IST
share
ಜಿಂದಾಲ್ ಕಂಪನಿಗೆ ಭೂಮಿ | ಹಿಂದಿನ ಬಿಜೆಪಿ ಸರಕಾರದ ತೀರ್ಮಾನವೇ ಜಾರಿ : ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ.ಪಾಟೀಲ್ ರವಿವಾರ ಇಲ್ಲಿ ಸ್ಪಷ್ಟಪಡಿಸಿದರು.

ಈ ವಿಷಯದಲ್ಲಿ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಅವರ ಆರೋಪ ನಿರಾಧಾರ. ಆಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರಕಾರದ ಜತೆ ಆಗಿರಬೇಕು ಎಂದು ಸಚಿವರು ತಿರುಗೇಟು ನೀಡಿದರು.

'ಯಡಿಯೂರಪ್ಪ ಸರಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್ ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರಕಾರ ನಡೆದುಕೊಂಡಿದೆ ಎಂದು ಅವರು ವಿವರಿಸಿದರು.

ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ' ಎಂದು ಅವರು ಎಚ್ಚರಿಸಿದರು.

ಬಿಜೆಪಿ ಸರಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿ ಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ ಅವರ ಜಾಣಮೌನ ಯಾಕೆ ಎಂದು ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X