Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿ...

ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿ ಭೂಕುಸಿತ ಪ್ರಕರಣ: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ವರದಿ ಸಲ್ಲಿಕೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 Jun 2025 12:02 AM IST
share
ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿ ಭೂಕುಸಿತ ಪ್ರಕರಣ: ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ವರದಿ ಸಲ್ಲಿಕೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಲ್ಲೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ರವಿವಾರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.

ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ತಾಳಿಕೊಳ್ಳುವ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಜೀವವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ಸೂಚಿಸಿದ್ದಾರೆ.

ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಅರಣ್ಯ ಪ್ರದೇಶ ಇದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿರುವ ಈಶ್ವರ ಖಂಡ್ರೆ, ಪಶ್ಚಿಮ ಘಟ್ಟದ ಪ್ರಾಮುಖ್ಯತೆ, ಸಂರಕ್ಷಣೆಯ ಮನವರಿಕೆ ಮಾಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X