Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇ-ಪ್ರೊಕ್ಯೂರ್‍ಮೆಂಟ್ 2.0 ಪೋರ್ಟಲ್,...

ಇ-ಪ್ರೊಕ್ಯೂರ್‍ಮೆಂಟ್ 2.0 ಪೋರ್ಟಲ್, ಡಿಐಎಸ್ ತಂತ್ರಾಂಶ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ27 Nov 2023 11:59 PM IST
share
ಇ-ಪ್ರೊಕ್ಯೂರ್‍ಮೆಂಟ್ 2.0 ಪೋರ್ಟಲ್, ಡಿಐಎಸ್ ತಂತ್ರಾಂಶ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.0 ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿಐಎಸ್ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.

ಸೋಮವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮದ ಸಂದರ್ಭದಲ್ಲಿ ಪೋರ್ಟಲ್ ಅನ್ನು ಲೋಕಾರ್ಪಣೆ ಮಾಡಿದರು. ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲ್ಲ ಇಲಾಖೆಗಳ 1 ಕೋಟಿ ರೂ.ಗಳಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‍ನಲ್ಲಿ ಡ್ಯಾಷ್ ಬೋರ್ಡ್‍ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ.

ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ 50 ಲಕ್ಷ ರೂ.ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲ ಟೆಂಡರ್‍ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‍ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‍ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಅದರಂತೆ ಇ-ಪ್ರೊಕ್ಯೂರ್‍ಮೆಂಟ್ ವೇದಿಕೆಯಲ್ಲಿ ಒಟ್ಟು 40ಸಾವಿರ ಟೆಂಡರ್‍ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ 50 ಲಕ್ಷ ರೂ.ಗಳಿಗಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್‍ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್‍ನಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್‍ನಲ್ಲಿ ಅಳವಡಿಸಲಾಗುವುದು.

ಡಿಐಎಸ್ ತಂತ್ರಾಂಶ: ಸಿಎಂ ಸೆ.12 ಮತ್ತು 13ರಂದು ನಡೆದ ‘ಜಿಲ್ಲಾಧಿಕಾರಿ ಮತ್ತು ಸಿಇಓಗಳ ಸಮ್ಮೇಳನ’ದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳಿಗೆ ಸೂಚಿಸಿರುತ್ತಾರೆ. ಹಾಗೂ ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿರುತ್ತದೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X