Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜ.12ರಂದು ಯುವನಿಧಿ ಯೋಜನೆಗೆ ಚಾಲನೆ;...

ಜ.12ರಂದು ಯುವನಿಧಿ ಯೋಜನೆಗೆ ಚಾಲನೆ; ನಾವು ನುಡಿದಂತೆ ನಡೆದಿದ್ದೇವೆ: ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ3 Jan 2024 5:27 PM IST
share
ಜ.12ರಂದು ಯುವನಿಧಿ ಯೋಜನೆಗೆ ಚಾಲನೆ; ನಾವು ನುಡಿದಂತೆ ನಡೆದಿದ್ದೇವೆ: ಸಚಿವ ಮಧುಬಂಗಾರಪ್ಪ

ಶಿವಮೊಗ್ಗ: ಜ.12ರಂದು ಕಾಂಗ್ರೆಸ್ ಸರಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ದೊರೆಯಲಿದ್ದು, ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಿ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಯುವ ನಿಧಿ ಯೋಜನೆಯ ಉದ್ಘಾಟನಾ ಸಮಾರಂಭದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು. ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಕೌಶಲ್ಯಾಭಿವೃದ್ಧಿ ಇಲಾಖೆ ಈಗಾಗಲೇ ಸಿದ್ಧತೆ ನಡೆಸಿದೆ. ಕಾರ್ಯಕರ್ತರು ನಿರುದ್ಯೋಗಿ ಯುವಕರ ಗಮನಕ್ಕೆ ತನ್ನಿ, ಯುವಕರಲ್ಲಿ ನಾವು ಪದವಿ ಮುಗಿಸಿದರು ಪೋಷಕರಿಗೆ ಭಾರವಾಗಿದ್ದೇವೆ ಎಂಬ ಆತಂಕ ಬೇಡ ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾತನಾಡಿ, ಈಗಾಗಲೇ ಜನಪ್ರಿಯ 4 ಗ್ಯಾರಂಟಿಗಳನ್ನು ನೀಡಿದ್ದೇವೆ. ಜನರ ಇಟ್ಟ ವಿಶ್ವಾಸಕ್ಕೆ ನಾವು ಋಣಿಯಾಗಿದ್ದೇವೆ. ಅರ್ಹ ಫಲಾನುಭವಿಗಳನ್ನು ಇಲಾಖೆ ಗುರುತಿಸಿ, ಈ ಯೋಜನೆಯಂತೆ ಯುವಕರಿಗೆ ಸಹಕಾರ ನೀಡುತ್ತೇವೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ಪ್ರಕಾಶ್ ಪಾಟೀಲ್ ಮಾತನಾಡಿ, ಶಿವಮೊಗ್ಗದಲ್ಲಿ ಜ.12ರಂದು ಯುವ ನಿಧಿ ಯೋಜನೆಯಡಿಯಲ್ಲಿ ಸೂಕ್ತ ಫಲಾನುಭವಿ ಪದವಿದರರಿಗೆ 3000, ಡಿಪ್ಲೋಮೋ ಪದವಿದರರಿಗೆ 1,500 ಧನಸಹಾಯ ನೀಡಲಿದ್ದು, ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಈಗಾಗಲೇ 25 ಸಾವಿರಕ್ಕೂ ಹೆಚ್ಚು ಯುವಕರು ನೊಂದಾಯಿಸಿದ್ದಾರೆ. ಇದಕ್ಕೆ ಸಮಯದ ಮಿತಿಯಿಲ್ಲ. ಯೋಜನೆ ಜಾರಿಯಾದ ನಂತರವು ಸತತವಾಗಿ ನೊಂದಾಣಿ ಮಾಡಿಸಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಭದ್ರಾವತಿ ಶಾಸಕ ಸಂಗಮೇಶ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಎಂ. ಮಂಜುನಾಥ್‌ಗೌಡ, ಎಂ.ಶ್ರೀಕಾಂತ್, ಆರ್.ಪ್ರಸನ್ನಕುಮಾರ್, ಇಸ್ಮಾಯಿಲ್ ಖಾನ್, ಬಲ್ಖೀಶ್ ಬಾನು, ಅನಿತಾಕುಮಾರಿ, ಕಲಗೋಡು ರತ್ನಾಕರ್, ಖಲೀಂ ಪಾಷಾ, ದೇವೇಂದ್ರಪ್ಪ, ಇಕ್ಕೇರಿ ರಮೇಶ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X