Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿರುದ್ಧ...

ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿರುದ್ಧ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ

ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಅಪಾಯ ಸಂಭವಿಸಬಹುದು ಎಂದಿದ್ದ ಕಾಂಗ್ರೆಸ್‌ ನಾಯಕ

ವಾರ್ತಾಭಾರತಿವಾರ್ತಾಭಾರತಿ3 Jan 2024 8:53 PM IST
share
ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿರುದ್ಧ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕರಸೇವಕರ ಕುರಿತು ನೀಡಿರುವ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸುತ್ತದೆ. ರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ತೆರಳುವ ಜನರಲ್ಲಿ ಭಯ ಹುಟ್ಟಿಸಲು ಈ ರೀತಿಯ ಹೇಳಿಕೆ ನೀಡಿದ್ದು, ಅವರ ಹೇಳಿಕೆ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಈಗ ರಾಮಮಂದಿರ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದರಿಂದ ಅದನ್ನು ತಡೆದುಕೊಳ್ಳಲಾಗದೇ ಹತಾಶರಾಗಿ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಕೇವಲ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯಲ್ಲ. ಹರಿಪ್ರಸಾದ್ ಅವರ ಹೇಳಿಕೆ ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ ಪೂಜಾರಿಯ ಬಂಧನದ ಒಂದು ಭಾಗವಾಗಿದೆ ಎಂದು ಹೇಳಿದರು.

ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಮುಖ ಕೇಂದ್ರವಾಗಿತ್ತು. ಹೀಗಾಗಿ ಅಲ್ಲಿ ಅನೇಕರ ಮೇಲೆ ಪ್ರಕರಣಗಳಿದ್ದವು. ಅವರನ್ನು ಈ ಸಂದರ್ಭದಲ್ಲಿ ಬಂಧಿಸುವ ಅವಶ್ಯಕತೆ ಏನಿತ್ತು. ಮುಖ್ಯಮಂತ್ರಿಗಳು ಅಪರಾಧಿಗಳನ್ನು ಹಿಡಿಯಬಾರದಾ ಎಂದು ಪ್ರಶ್ನಿಸಿದ್ದಾರೆ. ಅಪರಾಧಿಯನ್ನು ಹಿಡಿಯಬೇಕೆಂದರೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡದಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿರುವ, ಸಾರಾಯಿ ಮಾರಾಟ ಮಾಡುತ್ತಿರುವ ಪ್ರಕರಣಗಳು ರಾಜಾರೋಷವಾಗಿ ಹಗಲಿನಲ್ಲಿಯೇ ನಡೆಯುತ್ತಿವೆ. ಅದೆಲ್ಲವೂ ನಿಮಗೆ ಕಣ್ಣಿಗೆ ಕಾಣಿಸುತ್ತಿಲ್ಲ. 32 ವರ್ಷದ ಹಿಂದಿನ ಪ್ರಕರಣ ಕಣ್ಣಿಗೆ ಕಂಡಿದೆ. ಕೋರ್ಟ್ ನಲ್ಲಿ ಪ್ರಕರಣ ಇದ್ದರೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸುವ ಅಗತ್ಯವೇನಿತ್ತು. ಕರೆದು ವಿಚಾರಣೆ ಮಾಡಿ ಕಳುಹಿಸಬಹುದಿತ್ತು. ಇದರ ಬಗ್ಗೆ ಮುಖ್ಯಮಂತ್ರಿಯ ಬಳಿ ಉತ್ತರವಿಲ್ಲ ಎಂದು ಹೇಳಿದರು.

ಅಪರಾಧಿಗಳನ್ನು ಹಿಡಿದರೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಸಿಎಂ ಹೇಳುತ್ತಾರೆ. ಅಪರಾಧಿಗಳನ್ನು ಹಿಡಿಯುವ ತಾಕತ್ತು ನಿಮಗೆ ಇಲ್ಲ. ಪಿಎಫ್‌ಐ ನಂತಹ ದೇಶದ್ರೋಹಿ ಸಂಘಟನೆಗಳು, ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ಭಾಗಿಯಾದವರ ಪ್ರಕಣಗಳನ್ನು ವಾಪಸ್ ಪಡೆಯಲು ನಿಮ್ಮ ಶಾಸಕರು ಪತ್ರ ಬರೆಯುತ್ತಾರೆ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರು ಇವರಿಗೆ ಮುಗ್ದರು. ಆದರೆ, ಕರಸೇವಕರು ಅಪರಾಧಿಗಳಾಗಿ ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬ ವ್ಯಕ್ತಿಯನ್ನು ಬಂಧಿಸಲು ಇವರಿಗೆ 31 ವರ್ಷ ಬೇಕಿತ್ತಾ. ಹುಬ್ಬಳ್ಳಿ ಧಾರವಾಡದಲ್ಲಿ ಅಕ್ರಮ ಇಸ್ಪೀಟ್ ದಂಧೆ ನಡೆಯುತ್ತಿದೆ. ಗೋವಾ, ಮಹಾರಾಷ್ಟ್ರದಿಂದ ಅಕ್ರಮ ಮದ್ಯ ಸರಬರಾಜಾಗುತ್ತಿದೆ. ಅದನ್ನು ತಡೆಯುವುದನ್ನು ಬಿಟ್ಟು ಹುಬ್ಬಳ್ಳಿ ಧಾರವಾಡ ಪೊಲೀಸರು ಕರ ಸೇವಕರನ್ನು ಬಂಧಿಸಿದ್ದಾರೆ. ಇವರಿಗೆ ಬೇರೆ ಕೆಲಸ ಇಲ್ಲವೇ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X