ವಿಧಾನ ಪರಿಷತ್ ಚುನಾವಣೆ | ಮಧ್ಯಾಹ್ನ 1ರ ವೇಳೆಗೆ ಶೇ.95.50ರಷ್ಟು ಮತದಾನ

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ 212 ಶಾಸಕರಿಂದ ಮತ ಚಲಾವಣೆ
ಬೆಂಗಳೂರು : ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇ.95.50ರಷ್ಟು ಮತದಾನ ದಾಖಲಾಗಿದೆ.
ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಒಟ್ಟು 212 ಮಂದಿ ಶಾಸಕರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಸಾಗಿದ್ದು, ಬಹುತೇಕ ಎಲ್ಲ ಪಕ್ಷಗಳ ಶಾಸಕರು ಮತ ಚಲಾಯಿಸಿದ್ದಾರೆ. ಉಳಿದ ಕೆಲವೇ ಶಾಸಕರು ಮತದಾನ ಮಾಡಬೇಕಿದ್ದು, ನಿಗದಿತ ವೇಳೆಯೊಳಗೆ ಮತದಾನ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆ ರಾಜಕೀಯವಾಗಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಅಡ್ಡಮತದಾನ ಮತ್ತು ಪಕ್ಷಾಂತರ ಚರ್ಚೆಗಳ ನಡುವೆ ಮತದಾನ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ.
Next Story




