ವಿಧಾನ ಪರಿಷತ್ ಚುನಾವಣೆ | ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ : ಶಾಸಕ ಜಿ.ಟಿ.ದೇವೇಗೌಡ

ಬೆಂಗಳೂರು : ಬೆಂಗಳೂರು ವಿಧಾನಸೌಧದಲ್ಲಿ ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಮತದಾನ ಮಾಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರು ಯಾರಿಗೂ ಮತ ಹಾಕಬಹುದು. ನಾನು ನನ್ನ ಆತ್ಮಸಾಕ್ಷಿಯ ಪ್ರಕಾರ ಮತದಾನ ಮಾಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಬೆಳಗ್ಗೆ 11 ಗಂಟೆಯ ವೇಳೆಗೆ ಶೇ 34.78ರಷ್ಟು ರಷ್ಟು ಮತದಾನವಾಗಿದ್ದು, ಈವರೆಗೆ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ಸೇರಿದಂತೆ ಒಟ್ಟು 77 ಮಂದಿ ಶಾಸಕರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.
Next Story




