Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಗರು ಮೋದಿ ಭಕ್ತಿಯನ್ನು ಬಿಟ್ಟು...

ಬಿಜೆಪಿಗರು ಮೋದಿ ಭಕ್ತಿಯನ್ನು ಬಿಟ್ಟು ದೈವ ಭಕ್ತಿಯನ್ನು ಬೆಳಸಿಕೊಳ್ಳಲಿ: ಪ್ರಿಯಾಂಕ್‌ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ24 Feb 2024 12:21 PM IST
share
ಬಿಜೆಪಿಗರು ಮೋದಿ ಭಕ್ತಿಯನ್ನು ಬಿಟ್ಟು ದೈವ ಭಕ್ತಿಯನ್ನು ಬೆಳಸಿಕೊಳ್ಳಲಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬಿಜೆಪಿ ನಾಯಕರು ಮೋದಿ ಭಕ್ತರಾಗುವ ಬದಲು ದೈವ ಭಕ್ತರಾಗಿದ್ದರೆ ದ್ವೇಷ ಗುಣದ ಬದಲು ಧರ್ಮ ಗುಣ ಬರುತ್ತಿತ್ತು, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಸುಳ್ಳುಗಳ ಸ್ಟಡಿ ಮಾಡುವ ಬದಲು ದೇವಸ್ಥಾನಕ್ಕೆ ಹೋಗಿದ್ದರೆ ಸತ್ಯ ದರ್ಶನವಾಗುತ್ತಿತ್ತು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ರಾಜ್ಯ ಸರ್ಕಾರ ದೇವಸ್ಥಾನಗಳ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ ಟ್ವೀಟ್‌ ‌ ಮಾಡಿರುವ ಅವರು, ದೇವಾಲಯಗಳ ಹಣವನ್ನು ಇತರ ಕೆಲಸಗಳಿಗೆ ಬಳಸಿಕೊಳ್ಳುವ ನಿಯಮ ರೂಪಿಸಿದ್ದ ಬಿಜೆಪಿ ಹಿಂದೂ ವಿರೋಧಿಯೋ? ದೇವಾಲಯಗಳ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಬಳಸುವ ನಿಯಮ ರೂಪಿಸಿದ ಕಾಂಗ್ರೆಸ್ ಹಿಂದೂ ವಿರೋಧಿಯೋ? ಈ ಸತ್ಯವನ್ನು ಬಿಜೆಪಿ ನಾಯಕರು ದೇವಸ್ಥಾನಗಳಿಗೆ ಹೋಗಿ ಅರ್ಚಕರನ್ನು ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

2011ರಲ್ಲಿ ಮಾನ್ಯ ಯಡಿಯೂರಪ್ಪನವರು ಸಿಎಂ ಆಗಿದ್ದಾಗ, ಮಾನ್ಯ ವಿ ಎಸ್ ಆಚಾರ್ಯರವರು ಮುಜರಾಯಿ ಸಚಿವರಾಗಿದ್ದಾಗ ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿದೇಯಕವನ್ನು ಮಂಡಿಸಲಾಗಿತ್ತು. 10%ನಷ್ಟು ಹಣವನ್ನು ಸರ್ಕಾರ ಬಳಸಿಕೊಳ್ಳಲು ಅವಕಾಶವಿರುವ ಆ ವಿದೇಯಕದ ಲೋಪವನ್ನು ನಾವು ಸರಿಪಡಿಸಿದ್ದೇವೆ. A ಗ್ರೇಡ್ ದೇವಾಲಯಗಳ ಹಣವನ್ನು C ಗ್ರೇಡ್ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಅರ್ಚಕರ ಶ್ರೇಯೋಭಿವೃದ್ಧಿ ಯೋಜನೆಗಳಿಗೆ ಬಳಕೆಯಾಗುವಂತೆ ನಿಯಮ ರೂಪಿಸಿದ್ದೇವೆ ಎಂದಿದ್ದಾರೆ.

ಸತ್ಯ ಹೇಳುವವರನ್ನು ಹಿಂದೂ ವಿರೋಧಿಗಳು ಎನ್ನುವುದು ಬಿಜೆಪಿಗರ ಹಳೆಯ ಚಾಳಿ, ಆ ಅಭ್ಯಾಸ ಬಲದಂತೆ ಸತ್ಯ ಹೇಳುವ ಅರ್ಚಕರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಬೇಡಿ, ಅವರು ಧಾರ್ಮಿಕತೆಯ ನೈಜ ಪರಿಪಾಲಕರು. ಮೋದಿ ಭಕ್ತಿಯನ್ನು ಬಿಟ್ಟು ದೈವ ಭಕ್ತಿಯನ್ನು ಬೆಳಸಿಕೊಳ್ಳಲಿ, ಆಗಲಾದರೂ ದೇವರು ಬಿಜೆಪಿಯವರಿಗೆ ಒಳ್ಳೆಯ ವಿದ್ಯೆ, ಬುದ್ದಿ, ಜ್ಞಾನ ಕೊಡಬಹುದೇನೋ? ಎಂದು ಟ್ವೀಟ್‌ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X