Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಷ್ಟ-ನಷ್ಟ ಆಲಿಸದ ಪ್ರಧಾನಿ ಬಗ್ಗೆ...

ಕಷ್ಟ-ನಷ್ಟ ಆಲಿಸದ ಪ್ರಧಾನಿ ಬಗ್ಗೆ ಆರ್.ಅಶೋಕ್ ಮಾತಾಡಲಿ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ28 Nov 2023 7:15 PM IST
share
ಕಷ್ಟ-ನಷ್ಟ ಆಲಿಸದ ಪ್ರಧಾನಿ ಬಗ್ಗೆ ಆರ್.ಅಶೋಕ್ ಮಾತಾಡಲಿ: ಕಾಂಗ್ರೆಸ್

ಬೆಂಗಳೂರು: ‘ಅಧಿಕಾರವೆಂದರೆ ಲೂಟಿಗೆ ಸಿಗುವ ಅವಕಾಶ ಎಂದು ತಿಳಿದಿರುವ ಬಿಜೆಪಿಗೆ ಅಧಿಕಾರವೆಂದರೆ ಜನರ ನೋವಿಗೆ ಹೆಗಲಾಗುವ ಹೊಣೆಗಾರಿಕೆ ಎನ್ನುವುದು ತಿಳಿದಿಲ್ಲ. ಆರ್.ಅಶೋಕ್ ಅವರೇ, ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿ ಆಪರೇಷನ್ ಕಮಲದ ಮೂಲಕ ಅಧಿಕಾರ ಪಡೆದ ತಮ್ಮ ಮಾಜಿ ಸಿಎಂ ಹೇಗೆ ವರ್ತಿಸಿದ್ದರು ಎಂಬುದನ್ನು ಕಣ್ತುಂಬಿಕೊಳ್ಳಿ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ನಾವು ಜನರಿಂದ ಅಧಿಕಾರಕ್ಕೆ ಬಂದಿದ್ದೇವೆ, ಜನರೇ ನಮ್ಮ ಮಾಲಕರು, ಜನಸೇವೆಯೇ ನಮ್ಮ ಕರ್ತವ್ಯ. ಬೇಕಿದ್ದರೆ ಆರ್ ಅಶೋಕ್ ಅವರೂ ಜನತಾ ದರ್ಶನಕ್ಕೆ ಬಂದು ತಮ್ಮ ಪಕ್ಷದೊಳಗಿನ ಕಿರುಕುಳದ ನೋವನ್ನು ಹೇಳಿಕೊಳ್ಳಬಹುದು. ನಮ್ಮ ಸರಕಾರ ಸರ್ವರ ಹಿತ ಬಯಸುತ್ತದೆ’ ಎಂದು ತಿಳಿಸಿದೆ.

‘ಆರ್. ಅಶೋಕ್ ಅವರೇ, ಜನರೆಂದರೆ ಮಾರು ದೂರ ಓಡುವ ಪ್ರಧಾನಿ ಮೋದಿಗೆ ಮೊದಲು ಜನತಾ ದರ್ಶನ ಮಾಡಲು ಹೇಳಿ. ಅದು ಸಾಧ್ಯವಿಲ್ಲ ಎಂದಾದರೆ ಕನಿಷ್ಠ ಪಕ್ಷ ‘ಪತ್ರಕರ್ತರ ದರ್ಶನ’ವನ್ನದರೂ ಮಾಡಲು ಹೇಳಿ. ಕೇವಲ ಕ್ಯಾಮರಾ ದರ್ಶನ ಮಾಡುವುದರಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಈ ಹತ್ತು ವರ್ಷಗಳಲ್ಲಿ ಒಂದೂ ಪತ್ರಿಕಾಗೋಷ್ಠಿ ನಡೆಸಲಾಗದ, ಜನಸಾಮಾನ್ಯರ ದರ್ಶನ ಮಾಡಿ ಕಷ್ಟ ನಷ್ಟ ಆಲಿಸದ ಪ್ರಧಾನಿ ಬಗ್ಗೆ ಅಶೋಕ್ ಮಾತಾಡಲಿ. ಜನತಾ ದರ್ಶನವಿರಲಿ, ಸಿಎಂ ಆಗಿದ್ದಾಗ ಬಿಎಸ್‍ವೈ ಬೊಮ್ಮಾಯಿಯವರಿಗೆ ದರ್ಶನ ಕೊಡದ ಪ್ರಧಾನಿ ಬಗ್ಗೆ ಮಾತಾಡಲಿ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

‘ಜನತಾ ದರ್ಶನವನ್ನು ಟೀಕಿಸಿದ ಆಕ್ಸಿಡೆಂಟಲ್ ವಿಪಕ್ಷ ನಾಯಕ ಆರ್.ಅಶೋಕ್ ಅವರೇ, ನಿಮ್ಮ ಆಡಳಿತದಲ್ಲಿ ಇದ್ದಿದ್ದು ಶೇ.40ರಷ್ಟು ಕಮಿಷನ್ ದರ್ಶನವಲ್ಲವೇ?, ನಿಮ್ಮ ಆಡಳಿತದಲ್ಲಿ ಒಂದೇ ಒಂದು ದಿನವೂ ಜನರ ನೋವಿಗೆ ಕಿವಿಯಾಗುವ ಕೆಲಸ ಮಾಡಲಿಲ್ಲವೇಕೆ?. ಬಿಜೆಪಿಗೆ ಜನಪರವಾದ ಕೆಲಸಗಳನ್ನು ಮಾಡುವುದೂ ತಿಳಿದಿಲ್ಲ, ಬೇರೆಯವರು ಮಾಡುವುದನ್ನು ನೋಡಿ ಸಹಿಸುವುದಕ್ಕೂ ಆಗುವುದಿಲ್ಲ ಎಂಬುದಕ್ಕೆ ಆರ್.ಅಶೋಕ್ ಅವರ ಮಾತುಗಳೇ ನಿದರ್ಶನ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X