Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯವರು ಚಡ್ಡಿ ಮೆರವಣಿಗೆ ಬಿಟ್ಟು...

ಬಿಜೆಪಿಯವರು ಚಡ್ಡಿ ಮೆರವಣಿಗೆ ಬಿಟ್ಟು ರಾಜ್ಯದ ಸಮಸ್ಯೆ ಬಗೆ ಹರಿಸುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Sept 2023 2:02 PM IST
share
ಬಿಜೆಪಿಯವರು ಚಡ್ಡಿ ಮೆರವಣಿಗೆ ಬಿಟ್ಟು ರಾಜ್ಯದ ಸಮಸ್ಯೆ ಬಗೆ ಹರಿಸುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಾವೇರಿ ನೀರಿನ ವಿಚಾರದಲ್ಲಿ ಸಂಕಷ್ಟ ಸೂತ್ರ ಆಗಿಲ್ಲ, ಅದು ಆಗದೆ ಅಮಸ್ಯೆ ಬಗೆಹರಿಯುವುದಿಲ್ಲ, ಹಾಗಾಗಿ ಸಂಕಷ್ಟ ಸೂತ್ರ ಆಗಬೇಕು ಎಂಬುದೇ ನಮ್ಮ ಉದ್ದೇಶ. ಅದನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳವಾರ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಳೆ ಬಾರದಿದ್ದಾಗ ತಮಿಳುನಾಡಿಗೆ ನೀರು ಕೊಡಬೇಕು ಎಂದರೆ ಸಾಧ್ಯವಾಗುವುದಿಲ್ಲ, ಮಳೆ ಆಗದಿದ್ದ ಸಂದರ್ಭದಲ್ಲಿಹೊಂದಾಣಿಕೆ ಮುಖ್ಯ, ಹಾಗಾಗಿ ಸಂಕಷ್ಟ ಸೂತ್ರ ಜಾರಿಯಾಗಬೇಕು ಎಂದು ಹೇಳಿದರು.

ಕೇಂದ್ರದ ತಂಡ ರಾಜ್ಯಕ್ಕೆ ಬಂದು ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದರೂ ಕೇಂದ್ರದ ತಂಡ ಬಂದಿಲ್ಲ, ಬಿಜೆಪಿಯವರು ಚಡ್ಡಿ ಮೆರವಣಿಗೆ ಬಿಟ್ಟು ರಾಜ್ಯದ ಸಮಸ್ಯೆ ಕುರಿತು ಬಗೆ ಹರಿಸುವಂತೆ ಕೇಂದ್ರಕ್ಕೆ ಒತ್ತಾಯ ಮಾಡಲಿ. 25 ಜನ ಬಿಜೆಪಿ ಸಂಸದರೂ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಇಂತಹ ಸಂದರ್ಭ ಎದರುರಾಗುತ್ತದೆ ಎಂಬ ಕಾರಣಕ್ಕೆ ಮೇಕೆ ದಾಟು ಯೋಜನೆ ಜಾರಿಗೆ ಬರಬೇಕು ಎಂದು ಹೇಳುತ್ತಿರುವುದು. ಇದದರಿಂದ 60 ಟಿಎಂಸಿ ನೀರು ಸಂಗ್ರಹ ಮಾಡಬಹದು.‌ಇದು ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.

ನಾರ್ಮಲ್ ಸಮಯದಲ್ಲಿ 175.25 ಟಿಎಂಸಿ ನೀರು ಬಿಡಬೇಕು ಎಂದು ಸುಪ್ರೀಂ‌ಕೋಟ್೯ ಹೇಳಿದೆ. ಸಂಕಷ್ಟದ ಸಂದರ್ಭದಲ್ಲಿ ಸೂತ್ರ ಮುಖ್ಯ, ಹಾಗಾಗಿ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು.

ನಾವು ಕಾವೇರಿ ನಿರ್ವಹಣ ಪ್ರಾಧಿಕಾರದ ಮುಂದೆ ಸಮರ್ಥವಾಗಿ ವಾದ ಮಂಡಿಸಿದ್ದೇವೆ. ಆದರೂ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಆದೇಶ ಮಾಡಿದ್ದಾರೆ. ನಾವು ಸಮರ್ಥವಾಗಿ ವಾದ ಮಂಡಿಸಿಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆ ಸರಿಯಲ್ಲ, ಎಲ್ಲರ ಆಡಳಿತದ ಕಾಲದಲ್ಲೂ ಇದೇ ಲೀಗಲ್ ಟೀಂ ವಾದ ಮಂಡಿಸಿರುವುದು. ದೇವೇಗೌಡರ ಕಾಲದಲ್ಲೂ ಬಿಜೆಪಿ ಕಾಲದಲ್ಲೂ ಇದೇ ಲೀಗಲ್ ಟೀಂ ಇದ್ದದ್ದು ಎಂದು ವಿರೋಧ ಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

ವಿರೋಧ ಪಕ್ಷಗಳು ಕಾವೇರಿ ವಿಚಾರವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕಷ್ಟೇ ಹೊರತು ಜನರ ಮತ್ತು ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ರೈತರು ಜನರ ಹಿತರಕ್ಷಣೆಗೆ ನಮ್ಮ ಸರ್ಕಾರ ಹಿಂದೆ ಬಿದ್ದಿಲ್ಲ ಬೀಳೋದು ಇಲ್ಲ.‌ನಮಗೆ ಅಧಿಕಾರ ಮುಖ್ಯ ಅಲ್ಲ, ಜನರ ಹಿತ ಮುಖ್ಯ, ಹಾಗಾಗಿ ಕಾವೇರಿ ವಿಚಾರದ ಕುರಿತು ಸಮರ್ಥವಾಗಿ ವಾದ ಮಂಡಿಸಿದ್ದೇವೆ.‌ಆದರೂ ಕಾವೇರಿ ನಿರ್ವಹಣಾ ಪ್ರಾಧಿಕಾರ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದಿದೆ ಎಂದು ಹೇಳಿದರು.

ಬೆಂಗಳೂರು ಬಂದ್ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಬಂದ್ ಮಾಡಲು ಅವಕಾಶ ಇದೆ. ನ್ಯಾಯಾಲಯ ನೀರಿನ ವಿಚಾರದಲ್ಲಿ ಯಾವುದೇ ಪ್ರತಿಭಟನೆ ಸಭೆ ಡಮಾಡಬಾರದು ಎಂದಿರುವ ಕಾರಣ ಬಂದ್ ಮಾಡುವವರಿಗೆ ತೊಂದರ ಆಗಬಾರದು ಎಂದು 144 ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಹೇಳಿದರು.

ಬಿಜೆಪಿಯವರನ್ನು ಮೊದಲೆಲ್ಲಾ ಚಡ್ಡಿಗಳು ಎಂದು ಕರೆತುತ್ತಿದ್ದೆವು. ಪಾಪ ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ಮಾಡಿದ್ದಾರೆ. ಪ್ರತಿಭಟನೆಗೆ ನಮ್ಮ ತಕರಾರಿಲ್ಲ ಆದರೆ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಡಿಎಂಕೆ ಬಿ ಟೀಂ ಎನ್ನುವ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಎಐಡಿಎಂಕೆ ಜೊತೆ ಇದ್ದರಲ್ಲ ಅವರನ್ಮು ಏನಂತ ಕರಿಯಬೇಕು? ಮಾಜಿ ಪ್ರಧಾನಿ ದೇವೇಗೌಡರು ಕೇಂದ್ರಕ್ಕೆ ಪತ್ರ ಬರೆದಿರುವುದನ್ನು ಸ್ವಾಗತಿಸುತ್ತೇನೆ. ಆದರೆ ರಾಜ್ಯ ಸರ್ಕಾರ ವಿಫಲ ಎಂದಿರುವುದು ಸರಿಯಲ್ಲ ಎಂದು ಹೇಳಿದರು.

ರೈತರು ಜನರ ಹಿರಕ್ಷಣೆಗೆ ನಮ್ಮ ಸರ್ಕಾರ ಹಿಂದೆ ಬಿದ್ದಿಲ್ಲ. ಬೀಳೋದು ಇಲ್ಲ. ನಮಗೆ ಅಧಿಕಾರ ಮುಖ್ಯ ಅಲ್ಲ, ಜನರ ಹಿತ ಮುಖ್ಯ ಎಂದರು.

ದೇಶದಲ್ಲಿ ಬಿಜೆಪಿ ವಿರುದ್ಧದ ಶಕ್ತಿಗಳು ಒಂದಾಗುತ್ತಿವೆ.‌ಬಿಜೆಪಿ ಕಳೆದ ಒಂಬತ್ತು ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ, ಬಾವನಾತ್ಮಕ ವಿಚಾರವನ್ಮು ತಂದು ದೇಶ ಹೊಡೆಯುವ ಕೆಲಸ ಮಾಡಿದ್ದಾರೆ.‌ಸತ್ಯ ಗೊತ್ತಾಗಿ ಈಗ ಹೊರ ಬರುತ್ತಿದ್ದಾರೆ ತಿಳಿಸಿದರು.

ಇದೇ ವೇಳೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕರುಗಳಾದ ಎ.ಆರ್.ಜೃಷ್ಣಮೂರ್ತಿ, ಕೆ.ಹರೀಶ್ ಗೌಡ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರುಗಳಾದ ಎಂ.ಲಕ್ಷ್ಮಣ್, ಸಿ.ಬಸವೇಗೌಡ, ಕೆ.ಮರಿಗೌಡ, ಎಸ್.ಸಿ.ಬಸವರಾಜು, ಹಾಡ್ಯ ರಂಗಸ್ವಾಮಿ, ಜೆ.ಜೆ.ಆನಂದ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X