Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ...

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Nov 2023 3:49 PM IST
share
ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ , ನವೆಂಬರ್ 2 : ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನವಾಗಿದೆ. ನಾವು ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದೆವು. ಅದನ್ನು ಈಡೇರಿಸಿದ್ದೇವೆ. ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಹೋಗಿದ್ದರೂ ಕೂಡ ಐದು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದರು.

ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ಏಕೆ ವಿಳಂಬ ಮಾಡುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಿದ್ದು, ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಸಲ್ಲಿಸಿದ್ದಲ್ಲಿ, ಸರ್ಕಾರ ತಕ್ಷಣ ಅನುದಾನ ಒದಗಿಸಲಿದೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಕೇಳಿ, ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿದೆ ಎಂಬ ಯಡಿಯೂರಪ್ಪ ಅವರ ಆರೋಪಗಳು ಸುಳ್ಳು. ಯಡಿಯೂರಪ್ಪನವರು ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಬಿಜೆಪಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದೆ. ಅವರ ಪಕ್ಷದವರೇ ಅವರನ್ನು ಮನೆಗೆ ಕಳುಹಿಸಿದ್ದಾರೆ. ವಿಧಾನಸಭೆಯಲ್ಲಿ ಅವರು ಕಣ್ಣೀರಿಟ್ಟಿದ್ದರು. ಅವರ ಹೇಳಿಕೆಗಳಿಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ಮಾಡುತ್ತೇವೆ. ಮತ್ತೆ ಚುನಾವಣೆಗೆ ಹೋಗುತ್ತೇವೆ. ಮತ್ತೆ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದರೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು.

ಕಾಂಗ್ರೆಸ್ ಶಾಸಕರು ದುಬೈಗೆ ಪ್ರವಾಸ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಅವರು, ಶಾಸಕರು ಅವರ ಹಣದಲ್ಲಿ ಹೋಗುತ್ತಿದ್ದಾರೆ. ಸರ್ಕಾರದಿಂದ ನಾವು ಯಾರನ್ನೂ ಕಳಿಸಲ್ಲ ಎಂದರು.

ರಮೇಶ್ ಜಾರಕಿಹೊಳಿ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಅವರು ಸೋತು ಮನೆಯಲ್ಲಿರುವವರು. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆಲ್ಲಾ ಉತ್ತರಿಸಲಾಗುವುದಿಲ್ಲ ಎಂದರು.

ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ :

ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಹಾಗೂ ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು, ಈ ಬಗ್ಗೆಯೂ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕೃಷಿ ಪಂಪಸೆಟ್ ಮುಂದುವರೆಸಲಾಗುವುದು:

ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳು ರೈತರಿಗೆ ನಿಲ್ಲಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು ಎಂದು ತಿಳಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X