Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸೋಣ:...

ದೇಶದ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸೋಣ: ದಾವಣಗೆರೆ ವಿವಿ ಕುಲಪತಿ ಪ್ರೊ.ಕುಂಬಾರ ಕರೆ

ವಾರ್ತಾಭಾರತಿವಾರ್ತಾಭಾರತಿ15 Aug 2023 8:55 PM IST
share
ದೇಶದ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸೋಣ: ದಾವಣಗೆರೆ ವಿವಿ ಕುಲಪತಿ ಪ್ರೊ.ಕುಂಬಾರ ಕರೆ

ದಾವಣಗೆರೆ: ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ಸಿಕ್ಕಿರುವ ದೇಶದ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ಪ್ರಜೆಯ ಆತ್ಮವಿಶ್ವಾಸ, ದೇಶಾಭಿಮಾನ, ಸ್ವಾಭಿಮಾನ,, ಸಹಭಾಗಿತ್ವದಿಂದ ಸಮರ್ಪಕವಾಗಿ ಮುನ್ನಡೆಯಲು ಆದ್ಯತೆ ನೀಡಬೇಕಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಕಾರಣರಾದ ಎಲ್ಲಾ ಮಹಾನ್‌ ನಾಯಕರನ್ನು ಸ್ಮರಿಸಿಕೊಳ್ಳಬೇಕು. ಅವರ ಶೌರ್ಯ, ತ್ಯಾಗ, ಬಲಿದಾನ, ದೇಶಾಭಿಮಾನ ಮತ್ತು ಪ್ರಾಮಾಣಿಕ ಸೇವೆಗೆ ಹೃದಯಪೂರ್ವಕ ನಮನಗಳನ್ನು ಸಲ್ಲಿಸುವ ಸಂದರ್ಭ ಇದಾಗಿದೆ. ಅವರ ಸೇವೆಯು ಎಲ್ಲರಿಗೂ ಸ್ಫೂರ್ತಿಯ ಚೇತನವಾಗಬೇಕು ಎಂದು ತಿಳಿಸಿದರು.

ವಿಶ್ವದಲ್ಲಿ ಹಲವು ಕ್ಷೇತ್ರಗಳಲ್ಲಿ ಭಾರತವು ಪ್ರಗತಿಯನ್ನು ಸಾಧಿಸುತ್ತಿದೆ, ಇದು ದೇಶದ ಜನರ ಸಾಮರ್ಥ್ಯದ ಫಲವಾಗಿದೆ. ಇಷ್ಟಕ್ಕೆ ತೃಪ್ತಿರಾಗದೆ ಜಾಗತಿಕ ಮಟ್ಟದಲ್ಲಿ ಮುಂಚೂಣಿಗೆ ಬರಲು ಒಟ್ಟಾಗಿ ಪ್ರಯತ್ನಿಸಬೇಕು ಎಂದರು

ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಎಲ್ಲರೂ ಪ್ರತಿಪಾದನೆ ಮಾಡುತ್ತೇವೆ. ಆದರೆ ಕರ್ತವ್ಯಗಳ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು, ಪರಸ್ಪರ ಸಹಕಾರ ಸಹಭಾವದಿಂದ ಕೆಲಸ ಮಾಡಿದಾಗ ಯಶಸ್ಸಿನ ಗುರಿ ತಲುಪಲು ಸಾಧ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕುಲಸಚಿವೆ ಸರೋಜ ಬಿ.ಬಿ, ಹಣಕಾಸು ಅಧಿಕಾರಿ ಪ್ರೊ.ಶಶಿಧರ್, ವಿವಿಧ ನಿಕಾಯಗಳ ಡೀನರಾದ ಪ್ರೊ. ಲಕ್ಷ್ಮಣ, ಪ್ರೊ. ವೆಂಕಟರಾವ್ ಪಲಾಟಿ, ಪ್ರೊ. ರಾಮಲಿಂಗಪ್ಪ ಉಪಸ್ಥಿತರಿದ್ದರು. ಡಾ.ವೀರಪ್ಪ ಬಿ.ಎಚ್. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X