Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ...

ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ: ಕಾಂಗ್ರೆಸ್ ಲೇವಡಿ

ವಾರ್ತಾಭಾರತಿವಾರ್ತಾಭಾರತಿ17 Dec 2023 6:39 PM IST
share
ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ: ಕಾಂಗ್ರೆಸ್ ಲೇವಡಿ

ಬೆಂಗಳೂರು ‘ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ ಎನ್ನುವುದನ್ನು ವಿಶ್ಲೇಷಿಸಿದರೆ ಬಿಜೆಪಿಯೇ ಮೊದಲು ಹುಟ್ಟಿದ್ದು ಎಂಬ ಸತ್ಯ ಗೋಚರಿಸುತ್ತದೆ. ಬಿಜೆಪಿಯ ಸಾಮಾಜಿಕ ಜಾಲತಾಣದಲ್ಲಿ ಯಾರೋ ತಲೆಮಾಸದ ಎಳಸುಗಳನ್ನು ಕೂರಿಸಿದಂತಿದೆ. ಸುಳ್ಳು ಸಂಗತಿಯನ್ನು ಟ್ವೀಟ್ ಮಾಡಿ ಕೆಲ ಹೊತ್ತಿನಲ್ಲೇ ಡಿಲೀಟ್ ಮಾಡಿದ ಬಿಜೆಪಿಗೆ ಸುಳ್ಳುಗಳನ್ನು ನಿರೂಪಿಸುವ ದಮ್ಮು-ತಾಕತ್ತು ಇರಲಿಲ್ಲವೇ?’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ರವಿವಾರ ʼಎಕ್ಸ್‌ʼ ನಲ್ಲಿ ಸರಣಿ ಪೊಸ್ಟ್ ಹಾಕಿರುವ ಕಾಂಗ್ರೆಸ್, ‘ಬಿಜೆಪಿ ಹೇಳಿದಂತೆ ಘಟನೆ ನಡೆದ ವಂಟಮೂರಿ ಗ್ರಾಮ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿಲ್ಲ ಹಾಗೂ ಸಚಿವರು ಭೇಟಿ ನೀಡಲಿಲ್ಲ ಎನ್ನುವುದೂ ಸುಳ್ಳು. ಘಟನೆ ನಡೆದ ಸುದ್ದಿ ತಿಳಿದ ತಕ್ಷಣವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಗೆ ಸಾಂತ್ವಾನ ಹೇಳಿ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದೆ.

‘ಬಹುಶಃ ಬಿಜೆಪಿಗರಿಗೆ ಹೀನಾಯ ಸೋಲಿನ ಬಳಿಕ ಕುರುಡುತನ ಆವರಿಸಿರಬಹುದು ಇಲ್ಲವೇ ಮತಿಭ್ರಮಣೆಯಾಗಿರಬಹುದು. ದೌರ್ಜನ್ಯ ಪ್ರಕರಣಗಳು ನಡೆದಾಗ ಸರಕಾರ ಹೇಗೆ ನಡೆದುಕೊಳ್ಳುತ್ತದೆ ಎನ್ನುವುದರ ಮೇಲೆ ಆ ಸರಕಾರದ ಬದ್ಧತೆ ನಿರೂಪಿತವಾಗುತ್ತದೆ. ಸಂತ್ರಸ್ತೆಯನ್ನು ಉಸ್ತುವಾರಿ ಸಚಿವರು ಭೇಟಿಯಾಗಿದ್ದಾರೆ, ಮಹಿಳಾ-ಮಕ್ಕಳ ಕಲ್ಯಾಣ ಸಚಿವರು ಭೇಟಿಯಾಗಿದ್ದಾರೆ, ಸರಕಾರ 5ಲಕ್ಷ ರೂ. ಪರಿಹಾರ ಒದಗಿಸಿದೆ, 2ಎಕರೆ ಜಮೀನು ಮಂಜೂರು ಮಾಡಿದೆ’ ಎಂದು ಕಾಂಗ್ರೆಸ್ ವಿವರ ನೀಡಿದೆ.

‘ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಮಿತಿ ಮೀರಿತ್ತು, ಸ್ವತಃ ಅವರದೇ ಪಕ್ಷದ ಶಾಸಕರು, ಸಚಿವರು ದೌರ್ಜನ್ಯ ಎಸಗಿದ್ದರು. ಎಷ್ಟು ಪ್ರಕರಣಗಳಲ್ಲಿ ಬಿಜೆಪಿ ಸಚಿವರು ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದರು ಎಂಬುದನ್ನು ಸಾಕ್ಷಿ ಸಮೇತ ಚರ್ಚೆಗೆ ಬರುವ ಎದೆಗಾರಿಕೆ ಬಿಜೆಪಿಗಿದೆಯೇ?. ಮಣಿಪುರ, ರಾಜಸ್ತಾನ, ಮಧ್ಯಪ್ರದೇಶಗಳಲ್ಲಿ ನಡೆದ ಮಹಿಳಾ ದೌರ್ಜನ್ಯಗಳ ಬಗ್ಗೆ ತುಟಿ ಬಿಚ್ಚುವ ಧೈರ್ಯ ಬಿಜೆಪಿಗಿದೆಯೇ?, ಕೊನೆಯ ಮಾತು-ಬಿಜೆಪಿ ಸುಳ್ಳು ಹೇಳುವುದನ್ನು ಬಿಡದಿದ್ದರೆ 66 ಇರುವುದು ಮುಂದೆ 33 ಆಗಲಿದೆ!’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಬೆಳಗಾವಿಯಲ್ಲಿ ಕೌಟುಂಬಿಕ ಕಲಹದ ಕಾರಣಕ್ಕೆ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣದಲ್ಲಿ ನಮ್ಮ ಸರಕಾರದ ಕ್ರಮಗಳು. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಹಿಳೆಗೆ ಸರಕಾರ 5ಲಕ್ಷ ರೂ.ಪರಿಹಾರ ಧನ ನೀಡಿದೆ. ಸಂತ್ರಸ್ತ ಮಹಿಳೆಗೆ 2 ಎಕರೆ ಜಮೀನು ಮಂಜೂರು ಮಾಡಿದೆ. ಇದು ಜನಪರ ಕಾಂಗ್ರೆಸ್‍ನ ಬದ್ಧತೆ. ತಮ್ಮ ಆಡಳಿತಾವಧಿಯಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿಯವರಿಂದ ಹಲ್ಲೆಗೊಳಗಾಗಿದ್ದ ಮಹಿಳೆಗೆ ಬಿಜೆಪಿ ಮಾಡಿದ್ದೇನು?, ಹೇಳುವ ಧೈರ್ಯ ಇದೆಯೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ನಕಲಿ ಹಾಗೂ ಸುಳ್ಳು ಸುದ್ದಿಗಳನ್ನು ಜಾಲತಾಣಗಳಲ್ಲಿ ಹಾಕಿ ಡಿಲೀಟ್ ಮಾಡುತ್ತಿರುವ ಹತಾಶ ಬಿಜೆಪಿಯ ಮಿಥ್ಯೆ ಪ್ರಲಾಪಗಳು ಒಂದೆರಡಲ್ಲ!. ಬಿಜೆಪಿಗರು ಇಂದು ಬೆಳಗ್ಗೆಯಿಂದ ಮೂರ್ನಾಲ್ಕು ಸುಳ್ಳುಗಳನ್ನು ಸಾಮಾಜಿಕ ಜಾಲತಾಣಗಳ ಅಧಿಕೃತ ಖಾತೆಗಳಲ್ಲಿ ಹಂಚಿ ಡಿಲೀಟ್ ಮಾಡಿದ್ದಾರೆ. ಇನ್ನು ಅನಧಿಕೃತ ಖಾತೆಗಳಲ್ಲಿ ಸುಳ್ಳಿನ ಹೊಳೆಯನ್ನೇ ಹರಿಸುತ್ತಿದೆ.

ಡಾ.ಅಶ್ವತ್ಥ ನಾರಾಯಣರೇ, ಸಿದ್ದರಾಮಯ್ಯ ಅವರ ಸದನದಲ್ಲಿನ ಭಾಷಣವನ್ನು ಎಡಿಟ್ ಮಾಡಿ ಅಪಾರ್ಥ ಬರುವಂತೆ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದ್ದೀರಿ, ನಿಮಗೆ ಕೊಂಚವೂ ನೈತಿಕ ರಾಜಕಾರಣದ ಪ್ರಜ್ಞೆ ಇಲ್ಲದಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಸತ್ಯದ ಮೂಲಕ ಸೋಲಿಸಲಾಗದ ರಣಹೇಡಿ ಬಿಜೆಪಿ ಸುಳ್ಳುಗಳ ಮೂಲಕ ರಾಜಕಾರಣಕ್ಕೆ ಮುಂದಾಗಿದೆ, ಬಿಜೆಪಿಯ ಈ ಎಲ್ಲ ಸುಳ್ಳುಗಳಿಗೂ ನಮ್ಮ ಸರಕಾರ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಿದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ ಎನ್ನುವುದನ್ನು ವಿಶ್ಲೇಷಿಸಿದರೆ ಬಿಜೆಪಿಯೇ ಮೊದಲು ಹುಟ್ಟಿದ್ದು ಎಂಬ ಸತ್ಯ ಗೋಚರಿಸುತ್ತದೆ!

ಬಿಜೆಪಿಯ ಸಾಮಾಜಿಕ ಜಾಲತಾಣದಲ್ಲಿ ಯಾರೋ ತಲೆಮಾಸದ ಎಳಸುಗಳನ್ನು ಕೂರಿಸಿದಂತಿದೆ.

ಸುಳ್ಳು ಸಂಗತಿಯನ್ನು ಟ್ವೀಟ್ ಮಾಡಿ ಕೆಲ ಹೊತ್ತಿನಲ್ಲೇ ಡಿಲೀಟ್ ಮಾಡಿದ @BJP4Karnataka ಗೆ… pic.twitter.com/nTa8q8SKkp

— Karnataka Congress (@INCKarnataka) December 17, 2023

ಬೆಳಗಾವಿ ಜಿಲ್ಲೆಯಲ್ಲಿ ಕೌಟುಂಬಿಕ ಕಲಹದ ಕಾರಣಕ್ಕೆ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣದಲ್ಲಿ ನಮ್ಮ ಸರ್ಕಾರದ ಕ್ರಮಗಳು..

◆ಉಸ್ತುವಾರಿ ಸಚಿವ @JarkiholiSatish ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ.

◆ಮಹಿಳೆಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಧನ ನೀಡಿದೆ.

◆ಸಂತ್ರಸ್ತ ಮಹಿಳೆಗೆ…

— Karnataka Congress (@INCKarnataka) December 17, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X