ಹಿರಿಯ ಭಾಷಾಶಾಸ್ತ್ರಜ್ಞ, ವಿಮರ್ಶಕ ಡಾ. ಕೆ.ವಿ. ನಾರಾಯಣ ನಿಧನ

ಪ್ರೊ. ಕೆ.ವಿ. ನಾರಾಯಣ್
ಬೆಂಗಳೂರು: ಕನ್ನಡ ಸಾಹಿತ್ಯ, ಭಾಷೆ ಮತ್ತು ವಿಮರ್ಶಾ ಲೋಕಕ್ಕೆ ಅಪೂರ್ವ ಕೊಡುಗೆ ನೀಡಿದ ಹಿರಿಯ ಭಾಷಾಶಾಸ್ತ್ರಜ್ಞ, ಸಾಹಿತ್ಯ ಜಗತ್ತಿನಲ್ಲಿ 'ಕೆವಿಎನ್' ಎಂದೇ ಚಿರಪರಿಚಿತರಾಗಿದ್ದ ಪ್ರೊಫೆಸರ್ ಕೆ.ವಿ. ನಾರಾಯಣ್ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನ ಯಲಹಂಕದ ಬಳಿ ವಾಸವಿದ್ದ ಪ್ರೊ. ಕಂಪಲಾಪುರ ವೀರಣ್ಣ ನಾರಾಯಣ್ ಅವರ ಆರೋಗ್ಯದಲ್ಲಿ ಗುರುವಾರ ತಡರಾತ್ರಿ ದಿಢೀರ್ ಏರುಪೇರಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
Next Story




