Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ...

ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಯಲಿದೆ : ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ25 Aug 2024 6:44 PM IST
share
ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಯಲಿದೆ : ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸ್ಪಷ್ಟನೆ

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯನ್ನು ಕೆಎಎಸ್ ಆಕಾಂಕ್ಷಿಗಳ ಸಣ್ಣದೊಂದು ಗುಂಪು ಮುಂದಕ್ಕೆ ಹಾಕುವ ಲಾಬಿ ನಡೆಸುತ್ತಿದ್ದು, ಆದರೆ ಪರೀಕ್ಷೆ ನಿಗದಿಯಂತೆ ಮಂಗಳವಾರ(ಆ.27) ನಡೆಯಲಿದೆ ಎಂದು ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ರವಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಕೆಎಎಸ್ ಆಕಾಂಕ್ಷಿಗಳ ಸಣ್ಣದೊಂದು ಗುಂಪು ಆ.27ಕ್ಕೆ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಲು ಲಾಬಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಆ ಗುಂಪು ಎಲ್ಲ ರೀತಿಯ ಒತ್ತಡ ತಂತ್ರ ಬಳಸುತ್ತಿದ್ದಾರೆ. ಆ ಗುಂಪು ಕೆಪಿಎಸ್ಸಿ, ಡಿಪಿಎಆರ್ ಮತ್ತು ಸಿಎಂ ಕಚೇರಿಯ ಅಧಿಕಾರಿಗಳಿಗೆ ಕರೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಿ ಬಿಡುತ್ತಿದ್ದಾರೆ.

ಇದರ ಪರಿಣಾಮವಾಗಿ ನಾನು ಕೆಲವೊಮ್ಮೆ ನನ್ನ ಮೊಬೈಲ್ ಅನ್ನು ಏರೋಪ್ಲೇನ್ ಮೋಡ್‍ಗೆ ಇಡುವಂತಾಗಿದೆ. ‘ಕೆಪಿಎಸ್ಸಿ ಸುತ್ತ ಅನುಮಾನದ ಹುತ್ತ’ ಎಂದು ಹೇಳುವ ಮೂಲಕ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಈ 1,500 ಗುಂಪಿನ ವಿದ್ಯಾರ್ಥಿಗಳ ಗುಂಪಿನ ಒತ್ತಡಕ್ಕೆ ಮಣಿದರೆ 2.5 ಲಕ್ಷ ಪರೀಕ್ಷಾರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗಲಿದೆ. ಅವರೆಲ್ಲರೂ ಪರೀಕ್ಷೆಗೆ ತಯಾರಿ ನಡೆಸಿದ್ದು, ಪರೀಕ್ಷಾ ಕೇಂದ್ರಗಳಿಗೆ ತಮ್ಮ ಪ್ರವೇಶ ಪತ್ರವನ್ನು ನೋಂದಾಯಿಸಿದ್ದಾರೆ ಎಂದು ಅವರು ವಿವರಣೆ ನೀಡಿದ್ದಾರೆ.

ಮೊದಲಿಗೆ ಫೆ.26ಗೆ ಪರೀಕ್ಷೆಯ ಅಧಿಸೂಚನೆ ಹೊರಡಿಸಲಾಗಿತ್ತು. ಮೇ 5ಕ್ಕೆ ಪೂರ್ವಭಾವಿ ಪರೀಕ್ಷೆ ದಿನಾಂಕ ನಿಗದಿಗೊಳಿಸಲಾಗಿತ್ತು. ಆದರೆ ಮೇ 7ರ ಚುನಾವಣೆ ಹಿನ್ನೆಲೆ ಅದನ್ನು ಜು.21ಗೆ ಮುಂದೂಡಲಾಯಿತು. ಇತ್ತ ವಯೋಮಿತಿಯ ನಿರ್ಬಂಧ ಇದ್ದ 2017-18ರ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಜೂ.21ರಂದು ಆದೇಶ ಹೊರಡಿಸಲಾಯಿತು. ಹೀಗಾಗಿ ಪರೀಕ್ಷೆ ದಿನಾಂಕವನ್ನು ಆ.25ಕ್ಕೆ ಬದಲಾವಣೆ ಮಾಡಲಾಯಿತು.

ಜೂ.26ರಂದು ಇದನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಿಲಾಯಿತು. 2017-18ರ ಬ್ಯಾಚ್ ಅಭ್ಯರ್ಥಿಗಳಿಂದ ಅರ್ಜಿ ಪಡೆಯಲು ಸುಲಭ ಆವೃತ್ತಿಯ ಸಾಫ್ಟ್ ವೇರ್ ಜು.6ಕ್ಕೆ ಅಭಿವೃದ್ಧಿ ಪಡಿಸಲಾಯಿತು. ಜು.21ರಂದು ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಸುಮಾರು 1,560 ಅರ್ಜಿಗಳು ಸ್ವೀಕರಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಜು.1ರಂದು ಐಬಿಪಿಎಸ್ ಪರೀಕ್ಷೆ (ಬ್ಯಾಂಕ್ ಉದ್ಯೋಗ ನೇಮಕಾತಿ ಪರೀಕ್ಷೆ) ವೇಳಾಪಟ್ಟಿಯ ಅಧಿಸೂಚನೆ ಹೊರಡಿಸಲಾಯಿತು. ಈ ಸಂಬಂಧ ಸಿಎಂ ಕಚೇರಿ ಜೊತೆ ಚರ್ಚಿಸಲಾಯಿತು. ಬಳಿಕ ನಿಗದಿಯಾಗಿದ್ದ ಆ.25ರ ದಿನಾಂಕವನ್ನು ಮುಂದೂಡಿರುವುದಾಗಿ ಸಿಎಂ ಟ್ವೀಟ್ ಮೂಲಕ ಪ್ರಕಟಿಸಿದರು. ಲೋಕಸೇವಾ ಆಯೋಗ ಆ.5ರಂದು ಸಭೆ ನಡೆಸಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಲು ತೀರ್ಮಾನಿಸಿತು.

ಹೀಗಾಗಿ ಪರೀಕ್ಷಾರ್ಥಿಗಳಿಗೆ ವ್ಯಾಪಕ ಕಾಲಾವಕಾಶ ನೀಡಲಾಗಿದೆ. ಕೆಪಿಎಸ್ಸಿ ಪರೀಕ್ಷೆಯನ್ನು ತರಾತುರಿಯಲ್ಲಿ ನಡೆಸುತ್ತಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಸುಮಾರು 2.5ಲಕ್ಷ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ನಡೆಸಲು ಅಪಾರ ಪೂರ್ವ ಸಿದ್ಧತೆ ಮಾಡಲಾಗಿದೆ. ಕಾಗದಕ್ಕಾಗಿಯೇ ಸುಮಾರು 4-5ಕೋಟಿ ರೂ.ಖರ್ಚು ಮಾಡಲಾಗಿದೆ. ಎರಡು ತಿಂಗಳು ಪರೀಕ್ಷೆ ಮುಂದೂಡಿದರೆ ಮುದ್ರಿತ ಪ್ರಶ್ನೆ ಪತ್ರಿಕೆಯನ್ನು ನಾಶಗೊಳಿಸಿ ಹೊಸ ಕಾಗದ, ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಬೇಕು. ಸೋರಿಕೆ ಸಾಧ್ಯತೆ ಹಿನ್ನೆಲೆ ಪ್ರಶ್ನೆ ಪತ್ರಿಕೆಯನ್ನು ದೀರ್ಘಕಾಲ ಹಾಗೇ ಸಂಗ್ರಹಿಸಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅಪರ ಕಾರ್ಯದರ್ಶಿ ಅತೀಕ್ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X