ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇವಾ ವಿಸ್ತರಣೆ
ವಿತ್ತ ಇಲಾಖೆಗೆ ರಿತೇಶ್ ಕುಮಾರ್ ಸಿಂಗ್ ಪ್ರಧಾನ ಕಾರ್ಯದರ್ಶಿ

ಬೆಂಗಳೂರು : ಜನವರಿ 31, 2025 ರಂದು ಸೇವೆಯಿಂದ ನಿವೃತ್ತರಾಗಲಿದ್ದ ಮುಖ್ಯಮಂತ್ರಿಗಳ ಹಾಗೂ ವಿತ್ತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಮುಂದಿನ ಆದೇಶದವರೆಗೆ ವಿಸ್ತರಣೆ ನೀಡಲಾಗಿದೆ.
ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರನ್ನು ವಿತ್ತ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
Next Story





