ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿ ಎಲ್.ಕೆ.ಅತೀಕ್ ನೇಮಕ

ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದೆ.
ಸರಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗು ಇತರ ಭತ್ತೆಗಳು ಈ ಹುದ್ದೆಗೆ ಸಿಗಲಿವೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಅತೀಕ್ ಅವರು ಪ್ರಸ್ತುತ ವಹಿಸಿಕೊಂಡಿರುವ ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ ಅಧ್ಯಕ್ಷರ ಹುದ್ದೆಯಲ್ಲಿಯೂ ಮುಂದಿನ ಆದೇಶದವರೆಗೆ ಮುಂದುವರಿಯಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
Next Story




