Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜುಲೈ.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ...

ಜುಲೈ.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

"ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ"

ವಾರ್ತಾಭಾರತಿವಾರ್ತಾಭಾರತಿ14 July 2024 5:36 PM IST
share
ಜುಲೈ.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜು.22ಕ್ಕೆ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ(ಎಲ್‍ಕೆಜಿ, ಯುಕೆಜಿ)ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಮಡಿವಾಳದ ಸ್ತ್ರೀಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

ಸರಕಾರಿ ಮಾಂಟೆಸ್ಸರಿ: ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಸರಕಾರಿ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ. ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. 50 ವರ್ಷಗಳಿಂದ ಈ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ನೂ ಮುಂದೆ ಸರಕಾರಿ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಹೆಬ್ಬಾಳ್ಕರ್ ಹೇಳಿದರು.

ಗುಣಮಟ್ಟದ ಶಿಕ್ಷಣ ಗುರಿ: ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು.

ಶೀಘ್ರವೇ ವಿಮಾ ತೀರ್ಮಾನ: ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಲಾಗುವುದು. ಗೌರವ ಧನ ಹೆಚ್ಚಳದ ಬಗ್ಗೆಯೂ ಸಿಎಂ ಜೊತೆಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ಅವರು ತಿಳಿಸಿದರು.

ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕ ಟಿ.ಆರ್.ಚಂದ್ರಶೇಖರ್, ಸಿಐಟಿಯು ಹಾಗೂ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಕಾರ್ಯದರ್ಶಿ ಯಮುನಾ ಗಾಂವ್ಕರ್, ಕಾರ್ಯಾಧ್ಯಕ್ಷೆ ಶಾಂತ ಎನ್. ಘಂಟೆ, ಖಜಾಂಚಿ ಜಿ.ಕಮಲಾ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ ಸೇರಿದಂತೆ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X