ರಾಜ್ಯದಲ್ಲಿ ಶೀಘ್ರದಲ್ಲಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಾ. ಜಿ. ಪರಮೇಶ್ವರ್

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ (Photo: PTI)
ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು. ಈ ಸಂಬಂಧ ಪ್ರಕ್ರಿಯೆಗಳು ನಡೆಯಲಿವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು. ಅನಂತರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಹಂತ ಹಂತವಾಗಿ ನಡೆಸಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದು, ಒಟ್ಟು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 900ಕ್ಕೂ ಹೆಚ್ಚು ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಲಾಖೆಗಳ ಅವಶ್ಯಕತೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿಯೂ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಮಾಹಿತಿ ನೀಡಿದರು.
Next Story




