Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ನಾಯಕತ್ವದಲ್ಲಿ ಲೋಕಸಭೆ...

ಸಿದ್ದರಾಮಯ್ಯ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

"ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ"

ವಾರ್ತಾಭಾರತಿವಾರ್ತಾಭಾರತಿ17 Jan 2024 5:04 PM IST
share
ಸಿದ್ದರಾಮಯ್ಯ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷನಾಗಿ ನಾನಿದ್ದೇನೆ. ನಾವಿಬ್ಬರೂ ಸೇರಿ ಲೋಕಸಭಾ ಚುನಾವಣೆಯನ್ನು ನಡೆಸುತ್ತೇವೆ. ಅವರ ನಾಯಕತ್ವದಲ್ಲೆ ಚುನಾವಣೆ ನಡೆಯುತ್ತದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ಕುಮಾರಕೃಪಾ ಅತಿಥಿ ಗೃಹ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಯತೀಂದ್ರ ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ. ನಮ್ಮ ಸರಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್ ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಅವರ ಪಕ್ಷದ ವಿಚಾರ ಸರಿ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಕಲಿ ಮೈಸೂರು ಸ್ಯಾಂಡಲ್ ಸೋಪ್ ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ. ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ. ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ ಎಂದರು.

ಈ ಹಿಂದೆ ಮೈಸೂರು ಲ್ಯಾಂಪ್ಸ್ ಗಳನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರ್ ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

ನಿಗಮ ಮಂಡಳಿ ಪಟ್ಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಯಾವಾಗ ಹೇಳುತ್ತಾರೋ ಆಗ ನಿಮ್ಮ ಗಮನಕ್ಕೆ ತರುತ್ತೇನೆ ಎಂದರು.

Tags

DK Shivakumarಸಿದ್ದರಾಮಯ್ಯ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X