ಬೆಂಗಳೂರು: 12 RTO ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ಸೆ.13: ನಗರದ ಯಲಹಂಕ, ಇಂದಿರಾನಗರ, ಜಯನಗರ, ಕೋರಮಂಗಲ ಸೇರಿದಂತೆ 12 ಆರ್‍ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ಆಧಿಕಾರಿಗಳು ಬುಧವಾರ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ.
ಆರ್‍ಟಿಓ ಕಚೇರಿಗಳಲ್ಲಿ ಅಕ್ರಮ ವ್ಯವಹಾರ ಆರೋಪದ ದೂರು ಹಿನ್ನೆಲೆ, ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ನಗರದ ವಿವಿಧೆಡೆಗಲ್ಲಿರುವ 12 ಆರ್‍ಟಿಒ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
Next Story





