Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖವಾದರೂ...

ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖವಾದರೂ ತಗ್ಗದ ಪ್ರವಾಹ; ರಸ್ತೆಗಳು, ಮನೆಗಳು ಜಲಾವೃತ

ವಾರ್ತಾಭಾರತಿವಾರ್ತಾಭಾರತಿ25 July 2023 7:05 PM IST
share
ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖವಾದರೂ ತಗ್ಗದ ಪ್ರವಾಹ; ರಸ್ತೆಗಳು, ಮನೆಗಳು ಜಲಾವೃತ

ಮಡಿಕೇರಿ ಜು.25 : ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೆ ನದಿ ನೀರಿನ ಪ್ರವಾಹ ತಗ್ಗದೆ ಇರುವುದರಿಂದ ಜನರ ಜೀವನ ಸಹಜ ಸ್ಥಿತಿಗೆ ಮರಳಿಲ್ಲ. ಗಾಳಿ ಮತ್ತು ಪ್ರವಾಹದಿಂದಾಗಿ ಹಲವೆಡೆ ಹಾನಿ ಸಂಭವಿಸಿದ್ದು, ಹಲವು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ.

ದಾಖಲೆಯ ಮಳೆಯಾಗಿದ್ದ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಶ್ರೀಭಗಂಡೇಶ್ವರ ದೇವಾಲಯವನ್ನು ಆವರಿಸಿದ್ದ ಪ್ರವಾಹದ ನೀರು ತಗ್ಗಿದ್ದು, ಜನರು ಆತಂಕದಿಂದ ಹೊರ ಬಂದಿದ್ದಾರೆ. ಆದರೆ ಸುತ್ತಮುತ್ತಲ ಗ್ರಾಮಗಳ ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿವೆ.

ಮಡಿಕೇರಿ ನಗರದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಸಾಧಾರಣ ಮಳೆ, ಮಂಜು ಮತ್ತು ಚಳಿ ಗಾಳಿಯ ವಾತಾವರಣವಿದೆ. ಹಾರಂಗಿ ಜಲಾಶಯದಿಂದ ಬಿಟ್ಟ ನೀರು ಕುಶಾಲನಗರ ಪಟ್ಟಣದ ಸಾಯಿ ಬಡಾವಣೆ ಮತ್ತು ಕುವೆಂಪು ಬಡಾವಣೆಗೆ ನುಗ್ಗಿದ್ದು, ಇಲ್ಲಿನ ನಿವಾಸಿಗಳು ಕಣ್ಣೀರು ಹಾಕುತ್ತಿದ್ದಾರೆ. ನೀರಿನಿಂದಾಗಿ ವಸ್ತುಗಳಿಗೆ ಹಾನಿಯಾಗಿದ್ದು, ಪ್ರವಾಹಪೀಡಿತ ಪ್ರದೇಶದಲ್ಲಿ ಲೇಔಟ್ ಮಾಡಲು ಆಡಳಿತ ವ್ಯವಸ್ಥೆ ಯಾಕೆ ಅವಕಾಶ ನೀಡಿತು ಎಂದು ಮನೆ ಮಾಲಕರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಪೋಕ್ಲು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಮಳೆಯ ತೀವ್ರತೆ ಹೆಚ್ಚಾದ ಪರಿಣಾಮ ನಾಪೋಕ್ಲು ನಿವಾಸಿ ಅಜ್ಜೇಟಿರ ಬೋಪಣ್ಣ ಎಂಬುವರಿಗೆ ಸೇರಿದ ಅಂಗಡಿ ಮಳಿಗೆಗಳ ಮೇಲೆ ಪಕ್ಕದಲ್ಲಿದ್ದ ತಡೆಗೋಡೆ ಕುಸಿದುಬಿದ್ದು ನಷ್ಟ ಸಂಭವಿಸಿದೆ. ಸೋಮವಾರ ರಾತ್ರಿ ಅಂಗಡಿ ಮಳಿಗೆ ಮೇಲೆ ತಡೆಗೋಡೆ ಕುಸಿದಿದ್ದು ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಕಾರಿಗೂ ಹಾನಿಯಾಗಿದೆ. ಅಂದಾಜು 10 ಲಕ್ಷ ರೂ ಹಾನಿ ಸಂಭವಿಸಿದ್ದು ಸೂಕ್ತ ಪರಿಹಾರ ನೀಡುವಂತೆ ಮಾಲೀಕ ಅಜ್ಜೇಟಿರ ಬೋಪಣ್ಣ, ಸ್ಥಳೀಯರಾದ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ವಿಶು ಪೂವಯ್ಯ ಆಗ್ರಹಿಸಿದ್ದಾರೆ.

ಸಮೀಪದ ಬಲಮುರಿ ಗ್ರಾಮದಲ್ಲಿ ಬಾರಿ ಗಾಳಿ ಮಳೆಗೆ ಗ್ರಾಮದ ನಿವಾಸಿ ಈರ ಎಂಬುವವರ ವಾಸದ ಮನೆಯ ಮೇಲ್ಚಾವಣಿಯ ಶೀಟ್ ಗಳು ಹಾರಿಹೋಗಿದ್ದು ನಷ್ಟ ಉಂಟಾಗಿದೆ.

ಕಕ್ಕಬ್ಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕೆ.ಎಸ್. ಪೂವಣ್ಣ ಎಂಬುವವರ ಮನೆಯ ಮೇಲ್ಚಾವಣಿಯ ಹೆಂಚು ಹಾಗೂ ಶೀಟ್ ಗಳು ಗಾಳಿ ಮಳೆಗೆ ಹಾರಿಹೋಗಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗೆ ಅಮೃತ, ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದರು.

ಸೋಮವಾರಪೇಟೆಯ ಬೇಳೂರು ಗ್ರಾ.ಪಂ ವ್ಯಾಪ್ತಿಯ ಬಳಗುಂದ ಗ್ರಾಮದ ಅಶ್ವಿನಿ, ಸುರೇಶ್ ಹಾಗೂ ಗಂಗು ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ತಹಶೀಲ್ದಾರ್ ಎಸ್.ಎನ್. ನರಗುಂದ, ಪಿಡಿಒ, ಕಂದಾಯ ಪರಿವೀಕ್ಷಕರೊಂದಿಗೆ ಸ್ಥಳ ಪರಿಶೀಲಿಸಿದರು.

ವಿರಾಜಪೇಟೆ ತಾಲೂಕಿನ ತೋರ ಗ್ರಾಮಕ್ಕೆ ಕಂದಾಯ ಮತ್ತು ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿದರು. ಮಳೆಯಿಂದ ಸಂಭವಿಸಬಹುದಾದ ಅನಾಹುತದ ಕುರಿತು ನಿವಾಸಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ನೀಡಿದರು.

ಕುಶಾಲನಗರ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ಮನೆಗಳು ಮತ್ತು ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.

ಭಾಗಮಂಡಲ ಹೋಬಳಿ ಬೇಂಗೂರು ಚೇರಂಬಾಣೆ ವ್ಯಾಪ್ತಿಯ ದೋಣಿ ಕಡ್ ಎಂಬಲ್ಲಿ ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದ್ದು, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನಿರ್ದೇಶನದಂತೆ ಅಗ್ನಿಶಾಮಕ ಠಾಣಾಧಿಕಾರಿ ಜಿಲ್ಲಾ ಅಗ್ನಿಶಾಮಕ ಘಟಕದ ಸಹಕಾರದೊಂದಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ಫೈಬರ್ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ.

ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಸಮೀಪದ ಬಲಮುರಿ ಹಾಗೂ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾಗಿದೆ.

ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕೆ.ಎಸ್.ಪೂವಣ್ಣ ಎಂಬುವವರ ಮನೆಯ ಮೇಲ್ಚಾವಣಿಯ ಹೆಂಚು ಹಾಗೂ ಶೀಟ್ ಗಳು ಬಾರಿ ಗಾಳಿ ಮಳೆಗೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಬಲಮುರಿ ಗ್ರಾಮದ ನಿವಾಸಿ ಈರ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್‍ಗಳು ಗಾಳಿ ಮಳೆಗೆ ಹಾರಿ ಹೋಗಿದ್ದು, ನಷ್ಟ ಉಂಟಾಗಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.

ಮೂರ್ನಾಡು ನಾಪೋಕ್ಲು, ಚೆರಿಯ ಪರಂಬು-ನಾಪೋಕ್ಲು, ಭಾಗಮಂಡಲ-ನಾಪೋಕ್ಲು ನಡುವಿನ ಸಂಪರ್ಕ ಕಡಿತಗೊಂಡಿದೆ. ಮಳೆ ಗಾಳಿಯಿಂದಾಗಿ ವಿವಿಧಡೆ ಮರಗಳು ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ಮಳೆ ಬಿರುಸಿನಿಂದ ಸುರಿಯುತ್ತಿದ್ದು, ಜೀವ ನದಿ ಕಾವೇರಿ ಪ್ರವಾಹ ತುಂಬಿ ಬಹುತೇಕ ಭಾಗಗಳಲ್ಲಿ ಹಳ್ಳ, ಕೊಳ್ಳಗಳು ಭರ್ತಿಯಾಗಿದೆ. ಕಾವೇರಿ ನದಿತೀರದ ಹಲವು ಗದ್ದೆಗಳು ಜಲಾವೃತವಾಗಿವೆ.

ನಾಪೋಕ್ಲು- ಕೊಟ್ಟಮುಡಿ ಮಡಿಕೇರಿ ರಸ್ತೆಯಲ್ಲಿ ಕಾವೇರಿ ನದಿ ಪ್ರವಾಹ ಬಂದು ಸಂಚಾರ ಸ್ಥಗಿತಗೊಂಡಿದೆ. ಚೆರಿಯ ಪರಂಬು ಕಲ್ಲುಮೊಟ್ಟೆ ರಸ್ತೆಯಲ್ಲಿ ಪ್ರವಾಹದ ಮಟ್ಟ ಹೆಚ್ಚಳವಾಗಿ ಮನೆಗಳಿಗೆ ನೀರು ನುಗ್ಗುತ್ತಿದೆ. ಚೆರಿಯಪರಂಬು ಗ್ರಾಮದ ಹಲವು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.

ಮಂಗಳವಾರವು ವರುಣನ ಆರ್ಭಟ ಮುಂದುವರೆದಿದ್ದು, ಪ್ರವಾಹದ ಮಟ್ಟ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಚೆರಿಯಪರಂಬು ಕಾವೇರಿ ನದಿ ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಸ್ಥರು ಕತ್ತಲೆಯಲ್ಲಿ ಕಾಲ ಕಳೆಯುವಂತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X