Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ...

ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ : ಎಂ.ಬಿ.ಪಾಟೀಲ್

"ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ವಿಮಾನಸೇವೆ ಸ್ಥಗಿತಕ್ಕೆ 'ಉಡಾನ್ ಯೋಜನೆಯ ವೈಫಲ್ಯ'ವೇ ಕಾರಣ"

ವಾರ್ತಾಭಾರತಿವಾರ್ತಾಭಾರತಿ10 Nov 2026 2:05 PM IST
share
ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ : ಎಂ.ಬಿ.ಪಾಟೀಲ್

ಬೆಂಗಳೂರು : ನಾಗರಿಕ ವಿಮಾನಯಾನದ ಬೆಳವಣಿಗೆಯನ್ನು ಗುರಿಯಾಗಿ ಇಟ್ಟುಕೊಂಡು ರಾಜ್ಯ ಸರಕಾರವು ಸಮಗ್ರ ನೀತಿಯ‌ನ್ನು ರೂಪಿಸಿದ್ದು, ಇದನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಮಂಗಳವಾರ ತಮ್ಮನ್ನು ಭೇಟಿ‌ ಮಾಡಿದ ಮಾಧ್ಯಮದವರ ಜತೆ ಮಾತನಾಡಿರುವ ಅವರು, ರಾಜ್ಯ ಸರಕಾರವೇ ನಿರ್ವಹಿಸಲಿರುವ ವಿಮಾ‌ನ‌ ನಿಲ್ದಾಣಗಳಿಗೆ ಸಂಬಂಧಿಸಿದ ಅನುದಾನ, ವಿಜಿಎಫ್, ಸಮರ್ಥ ಕಾರ್ಯಾಚರಣೆ ಸೇರಿದಂತೆ ಹಲವು ಅಂಶಗಳನ್ನು ಈ ನೀತಿಯಲ್ಲಿ ಪರಿಗಣಿಸಲಾಗಿದೆ. ಇದು ಇಡೀ ದೇಶಕ್ಕೆ ಮಾದರಿಯಾಗಬಹುದು ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಸೇವೆ ಸ್ಥಗಿತವಾಗಿರುವುದಕ್ಕೆ ಕೇಂದ್ರ ಸರಕಾರದ ಉಡಾನ್-2 ನೀತಿಯ ದೋಷಗಳೇ ಕಾರಣ. ಅವರು ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿಗೆ ಕೊಟ್ಟರು. ಈಗ ಹುಬ್ಬಳ್ಳಿ ವಿಮಾ‌ನ ನಿಲ್ದಾಣದ ಖಾಸಗೀಕರಣ ಮಾಡುತ್ತಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣಕ್ಕೆ ನಾವು 1,000 ಕೋಟಿ ರೂ. ಖರ್ಚು ಮಾಡಿ, ಕೇಂದ್ರದ ಸುಪರ್ದಿಗೆ ಕೊಟ್ಟೆವು. ಅದರಿಂದ ರಾಜ್ಯಕ್ಕೆ ನಯಾ ಪೈಸೆಯೂ ಬರುತ್ತಿಲ್ಲ. ರಾಜ್ಯ ಸರಕಾರದ ಮೇಲೆ ಆರೋಪ ಮಾಡುತ್ತಿರುವ ಸಂಸದ ರಾಘವೇಂದ್ರ ಇವೆಲ್ಲವನ್ನೂ ತಿಳಿದುಕೊಳ್ಳಬೇಕು ಎಂದು ಅವರು ಉತ್ತರಿಸಿದರು.

ಉಡಾನ್ ಯೋಜನೆಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೆ ವಿಸ್ತರಿಸಬೇಕು. ಇದಾದ ಮೇಲೆ 50:50 ವೆಚ್ಚ ಅನುಪಾತದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಇದನ್ನು ನಂತರದ ಐದು ವರ್ಷ ನಡೆಸಿದರೆ ಒಳ್ಳೆಯ ಫಲಿತಾಂಶ ಬರುತ್ತದೆ ಎಂಬ ಸಲಹೆಯನ್ನು ನಾವು ಕೊಟ್ಟಿದ್ದೆವು. ಆದರೆ ಕೇಂದ್ರ ಸರಕಾರ ಇದಕ್ಕೆ ಬೆಲೆ‌ ಕೊಡಲಿಲ್ಲ. ಪರಿಣಾಮವಾಗಿ ಇಂದು ದೇಶದಲ್ಲಿ 17 ವಿಮಾನ ನಿಲ್ದಾಣಗಳು ಸ್ಥಗಿತಗೊಂಡಿವೆ ಎಂದು ಅವರು ನುಡಿದರು.

ನಾವು ವಿಮಾನ‌ ನಿಲ್ದಾಣಗಳನ್ನು ಸಾವಿರಾರು ಕೋಟಿ ಸುರಿದು ನಿರ್ಮಿಸಿ, ಅವುಗಳನ್ನು ಕೇಂದ್ರ ಸರಕಾರಕ್ಕೆ ಬಿಟ್ಟುಕೊಡುವುದು ಸರಿಯಲ್ಲ. ಹೀಗಾಗಿ ಶಿವಮೊಗ್ಗ, ರಾಯಚೂರು, ವಿಜಯಪುರ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸುತ್ತಿದ್ದೇವೆ. ಸ್ಥಗಿತಗೊಂಡಿದ್ದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಕೆಕೆಆರ್ಡಿಬಿ ವತಿಯಿಂದ ಶೇ. 80 ಮತ್ತು ರಾಜ್ಯ ಸರಕಾರದಿಂದ ಶೇ. 20ರಷ್ಟು ಹಣ ಕೊಟ್ಟು, ಮತ್ತೆ ವೈಮಾನಿಕ ಸೇವೆ ಆರಂಭಿಸಿದ್ದೇವೆ. ರಾಘವೇಂದ್ರ ಅವರಿಗೆ ಸಾಮರ್ಥ್ಯ ಇದ್ದರೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೀಗೆ ಹಣ ತರಲಿ ನೋಡೋಣ ಎಂದು ಅವರು ಸವಾಲು ಹಾಕಿದರು.

ಎಥೆನಾಲ್ ಗೊಂದಲಕ್ಕೆ ಗಡ್ಕರಿ ಕಾರಣ

ಪೆಟ್ರೋಲಿನಲ್ಲಿ ಅಳತೆ ಮೀರಿ ಎಥೆನಾಲ್ ಸೇರಿಸಿ ಕೇಂದ್ರ ಸರಕಾರ ಅನಾಹುತ ಮಾಡುತ್ತಿದೆ. ಇದಕ್ಕೆ ಹೆದ್ದಾರಿ ಸಚಿವ ನಿತಿ‌ನ್ ಗಡ್ಕರಿಯವರೇ ಪ್ರಧಾನ‌ ಕಾರಣರಾಗಿದ್ದಾರೆ. ಆದರೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇವನ್ನೆಲ್ಲ ಸಮರ್ಥಿಸಿಕೊಂಡಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಪಾಟೀಲ್ ಒತ್ತಾಯಿಸಿದರು.

ಎಥೆನಾಲ್ ಬಗ್ಗೆ ನಾನು ಸತ್ಯ ಹೇಳಿದರೆ ಅವರು ನಂಬುವುದಿಲ್ಲ. ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿರುವ ಮುರುಗೇಶ್ ನಿರಾಣಿ ಮತ್ತು ಪ್ರಭಾಕರ ಕೋರೆ ಮುಂತಾದವರನ್ನೇ ಕೇಳಿ‌ ನೋಡಲಿ. ನಾವು ಪೆಟ್ರೋಲಿನ‌ ಮಾದರಿಗಳನ್ನು ಕೇಂದ್ರ ಸರಕಾರದ ಪ್ರಯೋಗಾಲಯಗಳಿಗೇ ಅಲ್ಲವೇ ಕಳಿಸಿ ಕೊಟ್ಟಿದ್ದು? ಅದರಿಂದ ಬಂದಿರುವ ಫಲಿತಾಂಶದ ಮೇಲೇಕೆ ಅವರಿಗೆ ಅನುಮಾನ ಎಂದು ಅವರು ಪ್ರಶ್ನಿಸಿದರು.

ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಸಂಗ್ರಹ ಅಳತೆ ಮೀರಿದೆ. ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರದಲ್ಲೂ ಇದೇ ಸಮಸ್ಯೆ ಇದೆ. ಉತ್ತರಪ್ರದೇಶದಲ್ಲಿ ಮಾತ್ರ ಪರಿಸ್ಥಿತಿ ತುಸು ಪರವಾಗಿಲ್ಲ ಅಷ್ಟೇ. ಎಥೆನಾಲ್ ಉತ್ಪಾದನೆಗೆ ವಿಪರೀತ ಉತ್ತೇಜನ ಕೊಟ್ಟ ಕೇಂದ್ರ ಸರಕಾರ ಅದರ ಖರೀದಿಗೆ ಮುಂದಾಗಿಲ್ಲ. ದೇಶದ ನಾಲ್ಕೈದು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಪೈಲಟ್ ಸ್ವರೂಪದಲ್ಲಿ ತಂದು, ಅದರ ಸಾಧಕ-ಬಾಧಕಗಳನ್ನು ನೋಡಬೇಕಿತ್ತು. ಆದರೆ ಗಡ್ಕರಿ ಏಕಾಏಕಿ ಎಥೆನಾಲ್ ಮಿಶ್ರಣ ವ್ಯವಸ್ಥೆಯನ್ನು ಹೇರಿದರು. ಇದರಿಂದ ಇಷ್ಟೆಲ್ಲಾ ಅನಾಹುತವಾಗಿದೆ ಎಂದು ಪಾಟೀಲ್ ಆರೋಪಿಸಿದ್ದಾರೆ.

Tags

M. B. Patilflights
share
ವಾರ್ತಾಭಾರತಿ
ವಾರ್ತಾಭಾರತಿ
Next Story
X