Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ...

15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ : ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ9 March 2026 9:10 PM IST
share
15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ : ಮಧು ಬಂಗಾರಪ್ಪ
"ಸರಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ"

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸೋಮವಾರ ವಿಧಾನಪರಿಷತ್ತಿನ ಕಲಾಪದ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್.ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು.

ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದ ಯಾವುದೇ ಸರಕಾರಿ ಶಾಲೆಯನ್ನು ಸ್ವ ಇಚ್ಛೆಯಿಂದ ಸರಕಾರ ಮುಚ್ಚುವುದಿಲ್ಲ, ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರಬೇಕು. ಆದರೆ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮಧು ಬಂಗಾರಪ್ಪ ಉತ್ತರಿಸಿದರು.

ಪೂರ್ವ ಪ್ರಾಥಮಿಕ ತರಗತಿಯಿಂದ ಪದವಿ ಪೂರ್ವ ಶಿಕ್ಷಣದವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು ಸಳಾವಕಾಶ ಮತ್ತು ಉತ್ತಮ ದಾಖಲಾತಿ ಹೊಂದಿರುವ ಆಯ್ದ ಸರಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಪ್ರತಿ ಗ್ರಾ.ಪಂ.ಗೊಂದು ಕೆಪಿಎಸ್ ಶಾಲೆ ಪ್ರಾರಂಭಿಸಬೇಕು ಎಂಬ ಉದ್ದೇಶವಿದೆ. ಇದನ್ನು ಹಂತಹಂತವಾಗಿ ಮಾಡಲಾಗುವುದು. ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಸರಕಾರಿ ಶಾಲೆಗಳ ದಾಖಲಾತಿಗೆ ಶಾಸಕರು ಸಹ ಗಮನ ಹರಿಸಬೇಕು. ಶಾಲೆಗಳ ಆರಂಭಕ್ಕೂ ಮುನ್ನವೇ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪೂರ್ಣಗೊಳಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.

ಹಿಂದಿನ ಮೂರು ವರ್ಷಗಳಲ್ಲಿ 31 ಸರಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಪ್ರಶ್ನೆಗೆ ಸಚಿವ ಮಧುಬಂಗಾರಪ್ಪ ಉತ್ತರಿಸಿದರು.

ಒಂದೇ ಆವರಣ ಅಥವಾ ಒಂದೇ ಭೌಗೋಳಿಕ ಪ್ರದೇಶದಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ವಿಭಾಗಗಳಿದ್ದು, ಕನಿಷ್ಠ 500 ವಿದ್ಯಾರ್ಥಿಗಳ ದಾಖಲಾತಿ ಇರುವ ಕಡೆ 5 ಎಕರೆವರೆಗೆ ಸ್ಥಳಾವಕಾಶ ಪರಿವರ್ತಿಸಲು ಪರಿಗಣಿಸಲಾಗುವುದು. 1000 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.

Tags

Madhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X