Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಿಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ...

ದಿಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಬಂಧಿಸಿದ ಮಧ್ಯ ಪ್ರದೇಶ ಪೊಲೀಸರು : ಸಿಎಂ ಸಿದ್ದರಾಮಯ್ಯ ಖಂಡನೆ

"ನಮ್ಮ ರೈತರನ್ನು ಬಂಧಿಸಿರುವ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಮೋದಿ ನೇತೃತ್ವದ ಬಿಜೆಪಿ ಸರಕಾರ"

ವಾರ್ತಾಭಾರತಿವಾರ್ತಾಭಾರತಿ12 Feb 2024 2:04 PM IST
share
ದಿಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಬಂಧಿಸಿದ ಮಧ್ಯ ಪ್ರದೇಶ ಪೊಲೀಸರು : ಸಿಎಂ ಸಿದ್ದರಾಮಯ್ಯ ಖಂಡನೆ

ಬೆಂಗಳೂರು: ದಿಲ್ಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ಪೋಸ್ಟ್‌ ನಲ್ಲಿ ಬರೆದುಕೊಂಡಿರುವ ಅವರು, "ಬಂಧಿತರಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದಿಲ್ಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಲು ಅವಕಾಶ ನೀಡಬೇಕು" ಎಂದು‌ ಮಧ್ಯಪ್ರದೇಶ ಸರಕಾರವನ್ನು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

"ಬಂಧಿಸಿರುವುದು ಮಧ್ಯಪ್ರದೇಶದ ಸರಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಎನ್ನುವುದು ಸ್ಪಷ್ಟ" ಎಂದು ಹೇಳಿದ್ದಾರೆ.

"ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ" ಎಂದು ಟೀಕಿಸಿದರು.

"ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರಕಾರ ದೆದಿಲ್ಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು" ತಿಳಿಸಿದ್ದಾರೆ.

"ನರೇಂದ್ರ ಮೋದಿ ಅವರ ಸರಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X