Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ...

ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ: ಪ್ರತಾಪ್ ಸಿಂಹ

ನಮನ್ನು ದಾಟಿಕೊಂಡು ಹೋಗಿ ಮಹಿಷಾ ದಸರಾ ಆಚರಿಸಲಿ: ಶಾಸಕ ಟಿ.ಎಸ್‌‍.ಶ್ರೀವತ್ಸ

ವಾರ್ತಾಭಾರತಿವಾರ್ತಾಭಾರತಿ8 Sept 2023 4:10 PM IST
share
ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ: ಪ್ರತಾಪ್ ಸಿಂಹ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ ಆಚರಣೆ ಅಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. ಈಗಲೂ ಆಚರಿಸಲು ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಸಾರ್ವಜನಿಕರು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಬೆಟ್ಟಕ್ಕೆ ಬರುತ್ತಾರೆ. ಆಸಕ್ತರಿಗೆ ಚಾಮುಂಡೇಶ್ವರಿ ಇದ್ದಾಳೆ. ನಾಸಿಕ್ತರಿಗೆ ಬೇರೆಯವರು ಇರಬಹುದು. ಮಹಿಷಾ ದಸರಾ ಹೆಸರಿನಲ್ಲಿ ಬೆಟ್ಟದಲ್ಲಿ ಅನಾಚಾರ ಮಾಡಲು ಬಿಡುವುದಿಲ್ಲ ಮಹಿಷಾ ದಸರಾ ನಿಲ್ಲಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್‌‍ ಆಯುಕ್ತರಿಗೆ ನೇರವಾಗಿ ಹೇಳುತ್ತಿದ್ದೇನೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಸಂಘರ್ಷವಾದರೂ ಪರವಾಗಿಲ್ಲ. ತಡೆಯುತ್ತೇವೆ ಎಂದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡದಂತೆ ಮನವಿ ಮಾಡುತ್ತೇನೆ. ಮಹಿಷಾ ದಸರಾ ಆಚರಿಸುವವರಿಗೆ ಒಂದು ಕೇಳುತ್ತೇನೆ. ಅವರ ಮನೆಯಲ್ಲಿ ಯಾವುದಾದರೂ ಫೋಟೋ ಇಟ್ಟು ಆಚರಿಸಲಿ. ಮಹಿಷಾನಂತಹ ಮಗು ಹುಟ್ಟಲೆಂದು ಕೇಳಿಕೊಳ್ಳಲಿ. ಹೊರಗೆ ಆಚರಿಸಿ ಹಿಂದೂ ಭಕ್ತರ ಭಾವನೆಗೆ ಧಕ್ಕೆ ತರುವುದು ಬೇಡ ಎಂದು ನುಡಿದರು.

ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪಸಿಂಹ, ಹಿಂದೂ ಧರ್ಮದ ಅರಿವಿಲ್ಲದೇ ಬಹಳಷ್ಟು ಜನ ಮಾತಾಡುತ್ತಾರೆ. 700 ವರ್ಷ ಮುಸ್ಲಿಂರನ್ನು, 200 ವರ್ಷಗಳ ಕ್ರೈಸ್ತರನ್ನು ಸಹಿಸಿಕೊಂಡು ಶೇ. 80 ಹಿಂದೂಗಳು ಉಳಿದಿದ್ದಾರೆ. ಇನ್ನೂ ಸೊಳ್ಳೇ, ನೊಣಗಳನ್ನು ನುಂಗಿ ಜೀರ್ಣಿಸಿಕೊಳ್ಳುವ ಶಕ್ತಿಯಿದೆ ಎಂದರು.

ಹೈಕಮಾಂಡ್‌ ನಿರ್ಧಾರ ಬೆಂಬಲಿಸುತ್ತೇವೆ

ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ನಾಯಕರು ಯಾವುದೇ ನಿರ್ಧಾರ ಕೈಗೊಂಡರೂ ಬೆಂಬಲಿಸುತ್ತೇವೆ. ಹೈಕಮಾಂಡ್‌ ನಿರ್ಧಾರವನ್ನು ಮುಖಂಡರು, ಕಾರ್ಯಕರ್ತರು ಬೆಂಬಲಿಸುತ್ತಾರೆ. ಇವತ್ತಿಗೂ ಬಿ.ಎಸ್‌‍.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಎರಡೆರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅವರು ಹೇಳಿರುವುದಕ್ಕೆ ಬದ್ಧರಾಗಿರುತ್ತೇವೆ ಎಂದರು.

ಕರ್ನಾಟಕದಲ್ಲಿ 2004ರಿಂದ ಸತತವಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ. 2004-18, 2009-19, 2014-17, 2019- 25 ಸ್ಥಾನಗಳು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗೆ ಮರುಳಾದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಭಕ್ತರ ಭಾವನೆಗೆ ಧಕ್ಕೆ:

ಮಹಿಷಾ ದಸರಾ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಟಿ.ಎಸ್‌‍.ಶ್ರೀವತ್ಸ ಅವರು, ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಕೊಡುವ ಮಹಿಷಾ ದಸರಾವನ್ನು ತಡೆಯುತ್ತೇವೆ. ಭಕ್ತರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಇದನ್ನು ಸಹಿಸಲಾಗದು. ಚಾಮುಂಡೇಶ್ವರಿಯಿಂದ ಮೈಸೂರು ಹೆಸರು ಬಂದಿದೆ. ದಸರಾದಲ್ಲಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತೇವೆ. ಮಹಿಷಾಸುರ ನೋಡಿಕೊಂಡು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿಲ್ಲ. ದೇಶದ ವಿವಿಧ ರಾಜ್ಯಗಳಿಂದ ಭಕ್ತರು ದೇವಿ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದನ್ನು ತಡೆಯುವ ದೊಡ್ಡ ಸಂಚು ಇದು ಎಂದರು. ರಾತ್ರಿಯೆಲ್ಲಾ ಬೆಟ್ಟದಲ್ಲಿ ಮಲಗಿ ಪ್ರತಿಭಟಿಸುತ್ತೇವೆ. ನಮನ್ನು ದಾಟಿಕೊಂಡು ಹೋಗಿ ಆಚರಿಸಲಿ. ಮಹಿಷಾ ದಸರಾಆಚರಣೆಗೆ ಸರ್ಕಾರ ಅವಕಾಶ ಕೊಡಬಾರದು ಎಂದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X