Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ...

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ26 Jan 2025 1:40 PM IST
share
ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಅವರು, ʼಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ಈಗಿರುವ ಕೇಂದ್ರ ಸರಕಾರ ಸಂವಿಧಾನದ ಎಲ್ಲಾ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಇದರಿಂದ ನಾಗರಿಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುತ್ತಿದೆʼ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ʼದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ಸಿಕ್ಕ ನಂತರ ನಮಗೆ ವಿಶೇಷವಾದ ಸ್ಥಾನಮಾನ ಸಿಕ್ಕಿದೆ. ಇದು ಅನೇಕರಿಗೆ ಗೊತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮತ ಕೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಕೊಡುಗೆ. ಇವರ ಕೊಡುಗೆಯಿಂದ ನಾವು ಈ ದೇಶವನ್ನು ಸ್ವಾತಂತ್ರ್ಯವಾಗಿ ಉಳಿಸಿ, ದೇಶದ ಐಕ್ಯತೆಗಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ದುಃಖದ ವಿಚಾರ ಎಂದರೆ, ಅಮಿತ್ ಶಾರಂತಹ ದೇಶದ ಪ್ರಮುಖ ನಾಯಕರು ಸಂವಿಧಾನವನ್ನು ಹಿಯ್ಯಾಳಿಸುತ್ತಿದ್ದಾರೆ. ಸಂವಿಧಾನ ರಚಿಸಿದವರ ಬಗ್ಗೆ ಟೀಕೆ ಮಾಡಿ ಅವರಿಗೆ ಅಗೌರವ ತೋರುತ್ತಿದ್ದಾರೆʼ ಎಂದು ಬೇಸರ ವ್ಯಕ್ತಪಡಿಸಿದರು.

ʼಮೋದಿ ಅವರು ತಮ್ಮ ಭಾಷಣದಲ್ಲಿ ದೇಶವನ್ನು ಆರ್ಥಿಕವಾಗಿ ಮೂರನೇ ಸ್ಥಾನಕ್ಕೆ ತರಲು ಶಕ್ತಿ ತುಂಬುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ದೇಶ 5ನೇ ಸ್ಥಾನದಿಂದ ಮುಂದಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಯುಪಿಎ ಸರಕಾರದ ಶ್ರಮದಿಂದ ದೇಶವನ್ನು ಆರ್ಥಿಕವಾಗಿ ನಾಲ್ಕನೇ ಸ್ಥಾನಕ್ಕೆ ತರಲಾಗಿತ್ತು. ಆದರೆ ಈಗಿನ ಸರಕಾರಕ್ಕೆ ನಾಲ್ಕನೇ ಸ್ಥಾನಕ್ಕೆ ತರಲೂ ಸಾಧ್ಯವಾಗುತ್ತಿಲ್ಲ. ಕೇಂದ್ರ ಸರಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕೆ ಮಾಡಿರುವುದನ್ನು ಮೋದಿ ಅವರಾಗಲಿ, ಅವರ ಜತೆಗಿರುವವರಾಗಲಿ ಮಾಡುತ್ತಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕಾಗಿದೆʼ ಎಂದು ಹೇಳಿದರು.

ʼನಾಳೆ ಅಂಬೇಡ್ಕರ್ ಅವರ ಜನ್ಮಸ್ಥಳದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ದೊಡ್ಡ ಸಭೆ ನಡೆಸುತ್ತಿದ್ದು, ನಾನು ಅದರಲ್ಲಿ ಭಾಗವಹಿಸುತ್ತಿದ್ದೇನೆ. ಮೋದಿ ಹಾಗೂ ಅಮಿತ್ ಶಾ ಅವರು ದೇಶಕ್ಕೆ ಮಾಡುತ್ತಿರುವ ತೊಂದರೆ, ದೇಶದ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದರ ವಿರುದ್ಧ ಧ್ವನಿ ಎತ್ತಲಾಗುವುದುʼ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X