ಧರ್ಮದ ಹೆಸರಿನಲ್ಲಿ ನ್ಯಾಯಮೂರ್ತಿ ಮೇಲೆ ಶೂ ಎಸೆತ ಖಂಡನೀಯ : ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ | Photo: PTI
ಬೆಂಗಳೂರು, ಅ.8: ಧರ್ಮದ ಹೆಸರಿನಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವ ಘಟನೆ ಅತ್ಯಂತ ಖಂಡನೀಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಮುಖ್ಯ ನ್ಯಾಯಮೂರ್ತಿಯ ಮೇಲೆ ಶೂ ಎಸೆಯುವಂತಾದರೆ, ಜನ ಸಾಮಾನ್ಯರ ಪಾಡೇನು?, ನ್ಯಾಯಾಂಗ ವ್ಯವಸ್ಥೆ ಮೇಲೆ ಅಗೌರವ ತೋರಿದವರ ವಿರುದ್ಧ ಕೇಂದ್ರ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತನ್ನನ್ನು ವಕೀಲ ಎಂದು ಹೇಳಿಕೊಳ್ಳುವ ವ್ಯಕ್ತಿ ಮಾಡಿರುವ ದುಷ್ಕೃತ್ಯವನ್ನು ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಖಂಡಿಸಿದ್ದಾರೆ. ಕೊಂಚ ತಡವಾದರೂ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಇಂತಹ ವಿಚಾರಧಾರೆ ಇಟ್ಟುಕೊಂಡಿರುವವರು ನಮ್ಮ ನಡುವೆ ಇದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Next Story





