Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಸಭೆಗೆ ಅವಿರೋಧ ಆಯ್ಕೆ: "ಇದು ನನ್ನ...

ರಾಜ್ಯಸಭೆಗೆ ಅವಿರೋಧ ಆಯ್ಕೆ: "ಇದು ನನ್ನ ಕೊನೆಯ ಪ್ರಮಾಣಪತ್ರ ಸ್ವೀಕಾರ ಆಗಬಹುದು" ಎಂದ ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ12 Jun 2026 6:23 PM IST
share
ರಾಜ್ಯಸಭೆಗೆ ಅವಿರೋಧ ಆಯ್ಕೆ: ಇದು ನನ್ನ ಕೊನೆಯ ಪ್ರಮಾಣಪತ್ರ ಸ್ವೀಕಾರ ಆಗಬಹುದು ಎಂದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಆದರೆ, ಇದು ನನ್ನ ಕೊನೆಯ ಪ್ರಮಾಣಪತ್ರ ಸ್ವೀಕಾರ ಆಗಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಶುಕ್ರವಾರ ಇಲ್ಲಿನ ವಿಧಾನಸೌಧದಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆ ಚುನಾವನಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿ ಪ್ರತಿಕ್ರಿಯಿಸಿದ ಅವರು, ಇದು ನನ್ನ ಕೊನೆಯ ಪ್ರಮಾಣಪತ್ರ ಸ್ವೀಕಾರ ಆಗಬಹುದು ಎಂದು ನುಡಿದರು.

ಮಧ್ಯಪ್ರದೇಶದಲ್ಲಿ ರಾಜ್ಯಸಭಾ ಸದಸ್ಯರ ಆಯ್ಕೆ ಕುರಿತು ಮಾತನಾಡಿ, ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ ವಿಶೇಷ ಪ್ರಕರಣ. ಸುಪ್ರೀಂಕೋರ್ಟ್ ಹೇಳಿದಂತೆ ನಾವು ಹೈಕೋರ್ಟ್‍ಗೆ ಹೋಗುತ್ತೇವೆ. ಮಧ್ಯಪ್ರದೇಶದಲ್ಲಿ ನಡೆದಿರುವುದು ಕಾನೂನುಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ. ಪ್ರಧಾನಿ ನರೇಂದ್ರ ಮೋದಿ ಇಲ್ಲದೇ ಇದು ಆಗುತ್ತಿರಲಿಲ್ಲ, ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ ಎಂದು ತಿಳಿಸಿದರು.

ತನ್ನ ಜನರನ್ನು ಎಲ್ಲೆಡೆ ಕೂರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹಸ್ತಕ್ಷೇಪ ಇರಬಾರದು.ಆದರೆ, ಆರೆಸ್ಸೆಸ್ ಏಜೆಂಟ್‍ಗಳನ್ನು ಎಲ್ಲೆಡೆ ಇರಿಸಲಾಗಿದೆ. ನೀತಿ ನಿಯಮಗಳನ್ನು ಪರಿಶೀಲಿಸುತ್ತಿಲ್ಲ ಎಂದು ಆರೋಪಿಸಿದ ಅವರು, 13ನೆ ಬಾರಿ ಜನಪ್ರತಿನಿಧಿಯಾಗುವ ಅವಕಾಶ ಸಿಕ್ಕಿದೆ. ಕಲಬುರಗಿ ಜನತೆಗೆ ಧನ್ಯವಾದ ಹೇಳುತ್ತೇವೆ. ಜೀವನದಲ್ಲಿ ಸತತವಾಗಿ ಈ ಅವಕಾಶ ಸಿಗುತ್ತಿರುವುದು ಕಾಂಗ್ರೆಸ್ ಕೊಡುಗೆಯಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿಯಿಂದ ಇದುವರೆಗೆ ನನಗೆ ಅವಕಾಶ ನೀಡಿದ್ದಾರೆ ಎಂದರು.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನನ್ನ ಜೊತೆ ಇದ್ದು ಪ್ರೋತ್ಸಾಹ ನೀಡಿದ್ದಾರೆ. ರಾಹುಲ್ ಗಾಂಧಿ ನನ್ನ ಜೊತೆ ಸೌಹಾರ್ದತೆಯಿಂದ ವರ್ತಿಸುತ್ತಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಜ್ಯದ ಜನರು ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ಯಾವಾಗಲೂ ಯಾವುದೇ ಕೆಲಸದಲ್ಲಿ ಮಾಧ್ಯಮ ಬೆಂಬಲ ಇಲ್ಲದೇ ಯಾರೂ ಕೂಡ ಜನರಿಗೆ ಪರಿಚಿತರಾಗುವುದಿಲ್ಲ. ಲೋಪದೋಷವನ್ನು ಎತ್ತಿ ಹಿಡಿಯುವುದು ಮಾಧ್ಯಮದವರ ಕೆಲಸವಾಗಿದೆ ಎಂದು ಅವರು ಅಭಿನಂದಿಸಿದರು.

Tags

Mallikarjun Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X