Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ...

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ18 Aug 2026 1:30 PM IST
share
ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ ಆಯ್ಕೆ

ಬೆಂಗಳೂರು : ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಶಾಸಕ ಮಂಕಾಳ ವೈದ್ಯ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯತ್‌ನಿಂದ ವಿಧಾನಸಭೆಯವರೆಗೆ :

ಕರಾವಳಿಯ ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದು, ಮೀನುಗಾರಿಕೆ ಹಾಗೂ ಹೋಟೆಲ್ ಉದ್ಯಮದ ಮೂಲಕ ಬದುಕು ಕಟ್ಟಿಕೊಂಡ ಮಂಕಾಳ ವೈದ್ಯ ಅವರು, ಜನಸೇವೆಯ ಮೂಲಕ ರಾಜಕೀಯ ಪ್ರವೇಶಿಸಿ ಜಿಲ್ಲಾ ಪಂಚಾಯತ್ ಸದಸ್ಯ, ಶಾಸಕ, ಸಚಿವರಾಗಿ ಬೆಳೆದು ಇದೀಗ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನದತ್ತ ಸಾಗಿದ್ದಾರೆ.

ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಪ್ರೌಢಶಾಲಾ ಹಂತದಲ್ಲೇ ಶಿಕ್ಷಣ ಮೊಟಕುಗೊಳಿಸಿದ ಮಂಕಾಳ ವೈದ್ಯ ಅವರು, ಬದುಕಿನ ನಿರ್ವಹಣೆಗಾಗಿ ಬೆಂಗಳೂರಿಗೆ ತೆರಳಿ ಹೋಟೆಲ್‌ನಲ್ಲಿ ಕೆಲಸ ಮಾಡಿದರು. ಸುಮಾರು ನಾಲ್ಕು ವರ್ಷಗಳ ಬಳಿಕ ಊರಿಗೆ ಮರಳಿ ಮುರುಡೇಶ್ವರದಲ್ಲಿ ಹೋಟೆಲ್ ಉದ್ಯಮ ಹಾಗೂ ಮೀನುಗಾರಿಕಾ ವ್ಯವಹಾರ ಆರಂಭಿಸಿದರು.

2005ರಲ್ಲಿ ಮಾವಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಅವರು, ಬಳಿಕ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

2013ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಚುನಾವಣೆಯಲ್ಲಿ 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಭಟ್ಕಳದ ರಾಜಕೀಯ ಇತಿಹಾಸದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಆಯ್ಕೆಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಯೂ ಅವರ ಪಾಲಾಯಿತು.

2014ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಆದರೆ ಚುನಾವಣೆಯಲ್ಲಿ ಸೋಲು ಕಂಡರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಭಟ್ಕಳ ಕ್ಷೇತ್ರದಿಂದ ಸ್ಪರ್ಧಿಸಿದ ವೈದ್ಯರು 32 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳ ಸಚಿವ ಸ್ಥಾನದ ಜವಾಬ್ದಾರಿ ದೊರೆಯಿತು.

2026ರ ಆಗಸ್ಟ್‌ನಲ್ಲಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಮಂಕಾಳ ವೈದ್ಯರ ರಾಜಕೀಯ ಬದುಕಿಗೆ ಮತ್ತೊಂದು ಮಹತ್ವದ ತಿರುವು ದೊರೆತಿದೆ. ಸಚಿವ ಸ್ಥಾನದಿಂದ ಹೊರಬಂದ ಬಳಿಕ ಕಾಂಗ್ರೆಸ್ ಪಕ್ಷವು ಅವರನ್ನು ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಇದೀಗ ಉಪಸಭಾಧ್ಯಕ್ಷರಾಗಿ ಅವರು ಆಯ್ಕಯಾಗಿದ್ದಾರೆ.

Tags

Mankal VaidyaDeputy SpeakerLegislative Assembly
share
ವಾರ್ತಾಭಾರತಿ
ವಾರ್ತಾಭಾರತಿ
Next Story
X