Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ...

ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 Dec 2023 6:14 PM IST
share
ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಭಾರತ , ಕರ್ನಾಟಕ ರಾಜ್ಯವು ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ‘ವಿಶ್ವ ಏಡ್ಸ್ ದಿನ-2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ ಹಾಗೂ 1987ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು’ ಎಂದರು.

‘ಇತ್ತಿಚಿನ ದಿನಗಳಲ್ಲಿ ಎಚ್‍ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಸಮಾಜವನ್ನು ಎಚ್‍ಐವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು. 2015-2020ರ ವರೆಗೆ ಏಡ್ಸ್ ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೆ, ಇಡೀ ಸಮಾಜದ ಹೊಣೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮುನ್ನೆಚ್ಚರಿಕೆ ಅಗತ್ಯ: ಎಚ್‍ಐವಿ ಸಾಂಕ್ರಾಮಿಕ ರೋಗ, ಇದು ಪೂರ್ಣ ವಾಸಿಯಾದರೆ ಏಡ್ಸ್ ಪೀಡಿತರು ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಇನ್ನು ಐದಾರು ವರ್ಷಗಳಲ್ಲಿ ಸೊನ್ನೆಯ ದಿನ ಬರಲಿ ಎಂದು ಹಾರೈಸುತ್ತೇನೆ. ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂಬ ಭಾವನೆ ಇದೆ. ಆದರೆ ಹಾಗಾಗುವುದಿಲ್ಲ.

ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ: ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಅಸಾಧ್ಯ. ಆಮೇಲೆ ಅನುಭವಿಸುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾಮೂಹಿಕವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದು ಸಲಹೆ ನೀಡಿದರು.

ಸಮುದಾಯಗಳು ಮುನ್ನಡೆಸಲಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 2017ರಲ್ಲಿ ಏಡ್ಸ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು ನಮ್ಮ ಸರಕಾರ ಎಂದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಏಡ್ಸ್ ತಗಲಿರುವ ವ್ಯಕ್ತಿಯೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಯಿಲೆ ಬಂದ ನಂತರ 26 ವರ್ಷಗಳ ಕಾಲ ಬದುಕಿದ್ದಾರೆ ಹಾಗೂ ಧೈರ್ಯವಾಗಿದ್ದಾರೆ. ಆಂಜಿಯೋಪ್ಲಾಸ್ಟಿಯಾಗಿದ್ದರೂ ಧೈರ್ಯವಾಗಿ ಅದನ್ನು ಎದುರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X