Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಧಾನಿ ಸಮೀಪ 2ನೇ ವಿಮಾನ ನಿಲ್ದಾಣ,...

ರಾಜಧಾನಿ ಸಮೀಪ 2ನೇ ವಿಮಾನ ನಿಲ್ದಾಣ, ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ7 July 2024 8:16 PM IST
share
ರಾಜಧಾನಿ ಸಮೀಪ 2ನೇ ವಿಮಾನ ನಿಲ್ದಾಣ, ವಿಸ್ತೃತ ಚರ್ಚೆ ಬಳಿಕ ಸೂಕ್ತ ತೀರ್ಮಾನ : ಎಂ.ಬಿ.ಪಾಟೀಲ್

ಬೆಂಗಳೂರು : ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿ ಜತೆ ವಿಚಾರ ವಿನಿಮಯ ನಡೆಸಿ, ತೀರ್ಮಾನಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡನೆ ವಿಮಾನ ನಿಲ್ದಾಣ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರ ವರೆಗೂ 150ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದು ಹೇಳಿದರು.

ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಅವರು ನುಡಿದರು.

ಮುಂಬೈ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ, ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು ಎಂದು ಅವರು ವಿವರಿಸಿದರು.

ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಹೇಳುತ್ತಿದೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದು ಪಾಟೀಲ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X