Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಮಾನ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ...

ವಿಮಾನ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ | ತಾಂತ್ರಿಕ ಅಡಚಣೆಗಳ ನಿವಾರಣೆಗೆ ಎಂ.ಬಿ.ಪಾಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 Aug 2024 7:18 PM IST
share
ವಿಮಾನ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ | ತಾಂತ್ರಿಕ ಅಡಚಣೆಗಳ ನಿವಾರಣೆಗೆ ಎಂ.ಬಿ.ಪಾಟೀಲ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ನಡೆಸಿದರು.

ಹಲವು ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

219 ಕೋಟಿ ರೂ.ವೆಚ್ಚದಲ್ಲಿ, 322 ಎಕರೆ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕ ಅಡಚಣೆಗಳಿದ್ದು ತಕ್ಷಣ ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಅಗತ್ಯ ಬಿದ್ದರೆ ದಿಲ್ಲಿಗೂ ಹೋಗಿ ಬರಬೇಕು ಎಂದು ಆದೇಶಿಸಿದರು.

ರಾಯಚೂರು ವಿಮಾನ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು. ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು ತಕ್ಷಣ ಬಗೆಹರಿಸಲು ಎಂ.ಬಿ.ಪಾಟೀಲ್ ಸೂಚಿಸಿದರು.

ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚಿಸಿದರು.

ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು ಅಗತ್ಯ ಇರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ ಎಂ.ಬಿ.ಪಾಟೀಲ್, ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಕ್ಕೂ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಲಹೆ ನಿಡೀದರು.

ಏರ್-ಸ್ಟ್ರಿಪ್ಸ್ ಅಭಿವೃದ್ಧಿಗೆ ಭೂಮಿ ಗುರುತಿಸಿ: ಪ್ರವಾಸೋದ್ಯಮವನ್ನು ಪರಿಗಣಿಸಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪಿಯಲ್ಲಿ ಏರ್-ಸ್ಟ್ರಿಪ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಪೈಕಿ ಕೊಡಗು ಮತ್ತು ಧರ್ಮಸ್ಥಳದಲ್ಲಿ 140 ಎಕರೆ ಭೂಮಿ ಅಗತ್ಯವಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆ ವ್ಯವಹರಿಸಿ, ಈ ಪ್ರಕ್ರಿಯೆ ಮುಗಿಸಬೇಕು ಎಂದು ಅವರು ಹೇಳಿದರು.

ಚಿಕ್ಕಮಗಳೂರಿನಲ್ಲಿ ಈ ಯೋಜನೆಗೆ ಈಗಾಗಲೇ 120 ಎಕರೆ ಜಾಗ ಗುರುತಿಸಲಾಗಿದೆ. ಆದರೆ ಇದಕ್ಕೆ ಇನ್ನೂ 17.5 ಎಕರೆ ಅಗತ್ಯವಿದ್ದು, ಇದನ್ನು ಗುರುತಿಸಲು ನಿರ್ದೇಶಿಸಲಾಗಿದೆ. ಜತೆಗೆ ಈ ಸಂಬಂಧ ಡಿಪಿಆರ್ ಸಿದ್ಧ ಪಡಿಸಲು ಪವನ್ ಹನ್ಸ್ ಕಂಪೆನಿಗೆ ಹೇಳಲಾಗಿದೆ ಎಂದು ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.

ಕಾರವಾರದಲ್ಲಿ ಸಿವಿಲ್ ಎನ್‍ಕ್ಲೈವ್ ಅಭಿವೃದ್ಧಿಗೆ ಇನ್ನೂ 97 ಎಕರೆ ಭೂಮಿ ಬೇಕಾಗಿದೆ. ಇದಕ್ಕಾಗಿ ಈಗಾಗಲೇ 27.34 ಕೋಟಿ ರೂಪಾಯಿಗೂ ಹೆಚ್ಚು ಹಣ ಕೊಡಲಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಯಚೂರು ವಿಮಾನ ನಿಲ್ದಾಣಕ್ಕೆ ಸಂಬಂದಿಸಿದಂತೆ ಆ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು, ರಾಯಚೂರು ಸಂಸದ ಕುಮಾರ್ ನಾಯಕ್, ರಾಯಚೂರು ಜಿಲ್ಲಾಧಿಕಾರಿ ನಿತೇಶ್ ಜೊತೆ ಅವರು ಚರ್ಚೆ ನಡೆಸಿದರು.

ಚಿಕ್ಕಮಗಳೂರು ಏರ್ ಸ್ಟ್ರಿಪ್ ಗೆ ಸಂಬಂಧಿಸಿದಂತೆ ಅಲ್ಲಿನ ಶಾಸಕ ತಮ್ಮಯ್ಯ ಅವರೊಂದಿಗೆ ಎಂ.ಬಿ.ಪಾಟೀಲ್ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಮೂಲ ಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಕೊರ್ಲಪಟ್ಟಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X