Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾಗತಿಕ ಸೆಮಿಕಂಡಕ್ಟರ್ ಕಂಪೆನಿಗಳ ಜೊತೆ...

ಜಾಗತಿಕ ಸೆಮಿಕಂಡಕ್ಟರ್ ಕಂಪೆನಿಗಳ ಜೊತೆ ಎಂ.ಬಿ.ಪಾಟೀಲ್ ಸರಣಿ ಸಭೆ

ವಾರ್ತಾಭಾರತಿವಾರ್ತಾಭಾರತಿ1 Oct 2024 7:44 PM IST
share
ಜಾಗತಿಕ ಸೆಮಿಕಂಡಕ್ಟರ್ ಕಂಪೆನಿಗಳ ಜೊತೆ ಎಂ.ಬಿ.ಪಾಟೀಲ್ ಸರಣಿ ಸಭೆ

ನ್ಯೂಯಾರ್ಕ್ : ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅಮೆರಿಕಾಗೆ ಭೇಟಿ ನೀಡಿದ್ದು, ಸೆಮಿಕಂಡಕ್ಟರ್ ಉದ್ಯಮದ ಪ್ರಮುಖ ಜಾಗತಿಕ ಕಂಪನಿಗಳ ಮುಖ್ಯಸ್ಥರ ಜೊತೆ ಸರಣಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, ಅಮೆರಿಕದ ಸೆಮಿಕಂಡಕ್ಟರ್ ವಲಯದ ನಾಲ್ಕು ಪ್ರಮುಖ ಕಂಪನಿಗಳಾದ ಯುಜೆನಸ್ ಟೆಕ್ನಾಲಜಿ, ಲ್ಯಾಮ್ ರಿಸರ್ಚ್, ಅಲ್ಫಾವೇವ್ ಸೆಮಿ ಮತ್ತು ಎಂಐಪಿಎಸ್ ಟೆಕ್ನಾಲಜೀಸ್‍ನ ಉನ್ನತ ಅಧಿಕಾರಿಗಳ ಜೊತೆ ಎಂ.ಬಿ.ಪಾಟೀಲ್ ಸಮಾಲೋಚನೆ ನಡೆಸಿದ್ದಾರೆ.

ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಈ ಉದ್ದಿಮೆಗಳ ಪ್ರಮುಖರಿಗೆ ಎಂ.ಬಿ.ಪಾಟೀಲ್, ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನವನ್ನೂ ನೀಡಿದ್ದಾರೆ.

ಯುಜೆನಸ್‍ನ ಸಿಇಒ ಜೆಡಬ್ಲ್ಯು ಕಿಮ್ ಅವರ ಜೊತೆಗಿನ ಸಭೆಯಲ್ಲಿ, ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ವಿಪುಲ ಅವಕಾಶಗಳು ಇರುವುದನ್ನು ವಿವರಿಸಿದ ಎಂ.ಬಿ.ಪಾಟೀಲ್, ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಉದ್ಯಮಕ್ಕೆ ನೆರವಾಗಲು, ಸುಧಾರಿತ ಸೆಮಿಕಂಡಕ್ಟರ್ ತಯಾರಿಕಾ ಉಪಕರಣಗಳನ್ನು ಒದಗಿಸುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ಇರುವ ಯುಜೆನಸ್ ಟೆಕ್ನಾಲಜಿಯ ಪರಿಣತಿ ಬಳಸಿಕೊಳ್ಳುವ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು.

ಲ್ಯಾಮ್ ರಿಸರ್ಚ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ಯಾಟ್ ಲಾರ್ಡ್ ಅವರ ಭೇಟಿ ಸಂದರ್ಭದಲ್ಲಿ ಸಚಿವರು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕವು ಮಹತ್ವದ ಪಾತ್ರ ನಿರ್ವಹಿಸಲಿರುವುದನ್ನು ಮನದಟ್ಟು ಮಾಡಿಕೊಟ್ಟರು.

ವೇಫರ್ ಫ್ಯಾಬ್ರಿಕೇಷನ್ ಉಪಕರಣಗಳ ಜಾಗತಿಕ ಪೂರೈಕೆ ಕಂಪನಿಯಾಗಿರುವ ಲ್ಯಾಮ್ ರಿಸರ್ಚ್ ಇತ್ತೀಚೆಗೆ ಬೆಂಗಳೂರಿನಲ್ಲಿ ತನ್ನ ಸಿಸ್ಟಮ್ಸ್ ಲ್ಯಾಬ್ ಆರಂಭಿಸಿದೆ. ಆಲ್ಫಾವೇವ್ ಸೆಮಿಯ ಸಿಇಒ ಟೋನಿ ಪಿಯಾಲಿಸ್ ಅವರ ಜೊತೆಗಿನ ಭೇಟಿಯಲ್ಲಿ ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಉದ್ದಿಮೆಯನ್ನು ಸದೃಢವಾಗಿ ಬೆಳೆಸುವುದಕ್ಕೆ ಇರುವ ಸಹಯೋಗದ ಮಾರ್ಗೋಪಾಯಗಳ ಕುರಿತು ಚರ್ಚಿಸಿದರು.

ದತ್ತಾಂಶ ಮೂಲಸೌಲಭ್ಯಗಳ ಸಂಪರ್ಕ ಪರಿಹಾರಗಳಲ್ಲಿ ಅಗ್ರಗಣ್ಯವಾಗಿರುವ ಅಲ್ಫಾವೇವ್ ಸೆಮಿ, ಕರ್ನಾಟಕದ ಸೆಮಿಕಂಡಕ್ಟರ್ ಉದ್ಯಮದ ಭವಿಷ್ಯದ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಲು ತೀವ್ರ ಆಸಕ್ತಿ ವ್ಯಕ್ತಪಡಿಸಿದೆ. ಪಾಲೊ ಆಲ್ಟೊದಲ್ಲಿ ಎಂಐಪಿಎಸ್ ಟೆಕ್ನಾಲಜೀಸ್‍ನ ಸಿಇಒ ಸಮೀರ್ ವಾಸನ್ ಅವರನ್ನು ಭೇಟಿಯಾದ ಸಚಿವರು ರಾಜ್ಯದಲ್ಲಿ ಸೆಮಿಕಂಡಕ್ಟರ್ ವಿನ್ಯಾಸ ಮತ್ತು ನಾವೀನ್ಯತೆಗೆ ಪೂರಕ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾತುಕತೆ ನಡೆಸಿದರು.

ದುಂಡುಮೇಜಿನ ಸಭೆ: ಅಮೆರಿಕ-ಭಾರತ ಕಾರ್ಯತಂತ್ರ ಪಾಲುದಾರಿಕೆ ವೇದಿಕೆಯು (ಯುಎಸ್‍ಐಎಸ್‍ಪಿಎಫ್) ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಅಮೆರಿಕದ ಪ್ರಮುಖ ಕಂಪನಿಗಳ ಪ್ರತಿನಿಧಿಗಳನ್ನು ಉದ್ದೇಶಿಸಿ ಎಂ.ಬಿ.ಪಾಟೀಲ್ ಮಾತನಾಡಿದರು.

ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತದ ಕಾನ್ಸುಲ್ ಜನರಲ್ ಶ್ರೀಕರ್ ರೆಡ್ಡಿ ಅವರೂ ಈ ಸಭೆಯಲ್ಲಿ ಭಾಗವಹಿಸಿದ್ದರು. ಅಮೆರಿಕ ಮತ್ತು ಕರ್ನಾಟಕದ ನಡುವಣ ಬಹುಬಗೆಯ ಸಹಯೋಗ ಹಾಗೂ ಬಾಂಧವ್ಯ ವೃದ್ಧಿ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಉದ್ಯಮಿಗಳ ಭೇಟಿ ಹಾಗೂ ಸಮಾಲೋಚನೆ ಸಭೆಗಳಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಮಹೇಶ್ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X